×
Ad

ಕ್ರೀಡೆಯಿಂದ ಮನಸ್ಸು-ದೇಹ ಸಮರ್ಥ: ಜಿಲ್ಲಾಧಿಕಾರಿ

Update: 2019-11-25 19:59 IST

ಉಡುಪಿ, ನ.25: ಕ್ರೀಡಾ ಚಟುವಟಿಕೆಗಳು ನಮ್ಮ ಮನಸ್ಸು ಹಾಗೂ ದೇಹವನ್ನು ಸಮರ್ಥವಾಗಿರಿಸುವುದರ ಜೊತೆಗೆ, ನೆಮ್ಮದಿ ಹಾಗೂ ಜೀವನದಲ್ಲಿ ತಾಳ್ಮೆ, ಸಮಾಧಾನಗಳನ್ನು ಕಾಯ್ದಿರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

ಸೋಮವಾರ ಉಡುಪಿ ಜಿಲ್ಲಾ ಗೃಹ ರಕ್ಷಕದಳದ ವತಿಯಿಂದ ಉಡುಪಿ ಜಿಲ್ಲಾ ಗೃಹ ರಕ್ಷಕದಳ ಕಚೇರಿ ಆವರಣದಲ್ಲಿ ನಡೆದ ಜಿಲ್ಲಾ ಮಟ್ಟದ ವೃತ್ತಿಪರ ಮತ್ತು ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗೃಹ ರಕ್ಷಕ ದಳದ ಸಿಬ್ಬಂದಿಗಳು ಜನರ ಸೇವೆಯಲ್ಲೇ ತಮ್ಮ ಜೀವನವನ್ನು ಸವೆಸುತಿದ್ದಾರೆ. ಕೆಲಸದ ಒತ್ತಡದ ನಡುವೆ ತಮಗಾಗಿ ಸ್ವಲ್ಪ ಬಿಡುವನ್ನು ಪಡೆಯುವ ಉದ್ದೇಶದಿಂದ ಗೃಹ ರಕ್ಷಕದಳದ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಹೇಳಿದರು.

ಸೋಮವಾರ ಉಡುಪಿ ಜಿಲ್ಲಾ ಗೃಹ ರಕ್ಷಕದಳದ ವತಿಯಿಂದ ಉಡುಪಿ ಜಿಲ್ಲಾ ಗೃಹ ರಕ್ಷಕದಳ ಕಚೇರಿ ಆವರಣದಲ್ಲಿ ನಡೆದ ಜಿಲ್ಲಾ ಮಟ್ಟದ ವೃತ್ತಿಪರ ಮತ್ತು ಕ್ರೀಡಾಕೂಟದ ಸಮಾರೋಪ ಸಮಾರಂದಲ್ಲಿಾಗವಹಿಸಿ ಮಾತನಾಡಿದ ಅವರು, ಗೃಹ ರಕ್ಷಕ ದಳದ ಸಿಬ್ಬಂದಿಗಳು ಜನರ ಸೇವೆಯಲ್ಲೇ ತಮ್ಮ ಜೀವನವನ್ನು ಸವೆಸುತಿದ್ದಾರೆ. ಕೆಲಸದ ಒತ್ತಡದ ನಡುವೆ ತಮಗಾಗಿ ಸ್ವಲ್ಪ ಬಿಡುವನ್ನು ಪಡೆಯುವ ಉದ್ದೇಶದಿಂದ ಗೃಹ ರಕ್ಷಕದಳದ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಹೇಳಿದರು.

ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿದ ಕ್ರೀಡಾಪಟುಗಳಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಿದ ಜಿಲ್ಲಾಧಿಕಾರಿ, ಮುಂದೆ ಮಂಗಳೂರಿನಲ್ಲಿ ನಡೆಯುವ ವಲಯ ಮಟ್ಟದ ಕ್ರೀಡಾಕೂಟ ಹಾಗೂ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಬಾಗವಹಿಸಿ, ಪ್ರಶಸ್ತಿ ಗೆದ್ದು, ಜಿಲ್ಲೆಗೆ ಹೆಸರು ತರುವಂತಾಗಲಿ ಎಂದು ಶುಭಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗೃಹ ರಕ್ಷಕದಳದ ಜಿಲ್ಲಾ ಕಮಾಂಡೆಂಟ್ ಡಾ.ಕೆ.ಪ್ರಶಾಂತ್ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಗೃಹರಕ್ಷಕ ದಳದ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಗೃಹರಕ್ಷಕ ದಳದ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆ ಡೆಪ್ಯೂಟಿ ಕಮಾಂಡೆಂಟ್ ರಮೇಶ್ ವಂದಿಸಿದರು. ಸಾಯಿನಾಥ್ ಉದ್ಯಾವರ್ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News