×
Ad

ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ 24 ಗಂಟೆಗಳ ಸಖಿ ಕೇಂದ್ರ

Update: 2019-11-25 21:07 IST

ಮಂಗಳೂರು, ನ.25: ಜಿಲ್ಲಾ ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ‘ಗೆಳತಿ ಜಿಲ್ಲಾ ವಿಶೇಷ ಚಿಕಿತ್ಸಾ ಘಟಕ’ವು ನವೆಂಬರ್ 21ರಿಂದ ಸ್ಥಗಿತಗೊಂಡಿದ್ದು, ಇದೀಗ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ಸೇವೆ, ಪೊಲೀಸ್ ಸೇವೆ, ಕಾನೂನು ಸೇವೆ, ಸಮಾಲೋಚನೆ ಮತ್ತು ತಾತ್ಕಾಲಿಕ ವಸತಿ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಯೋಜನೆಯಾದ ಸಖಿ (ಒನ್ ಸ್ಟಾಪ್ ಸೆಂಟರ್) ಕೇಂದ್ರವು ಜಿಲ್ಲಾ ಸರಕಾರಿ ಲೇಡಿಗೋಷನ್ ಆಸ್ಪತ್ರೆಯ 2ನೇ ಮಹಡಿಯಲ್ಲಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ.

ದೌರ್ಜನ್ಯಕ್ಕೊಳಗಾದ ಮಹಿಳೆಯರು ಸಖಿ ಕೇಂದ್ರದ ನೆರವನ್ನು ಪಡೆದುಕೊಳ್ಳಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News