ಖಾಸಗಿ ಬಸ್ ಢಿಕ್ಕಿ: ಪಾದಚಾರಿ ಮಹಿಳೆ ಮೃತ್ಯು
Update: 2019-11-25 21:41 IST
ಮಂಗಳೂರು, ನ.25: ರಾಷ್ಟ್ರೀಯ ಹೆದ್ದಾರಿ 66ರ ಚಿತ್ರಾಪುರ ದ್ವಾರದ ಎದುರು ರಸ್ತೆ ದಾಟುತ್ತಿದ್ದ ಮಹಿಳೆಗೆ ಖಾಸಗಿ ಬಸ್ ಸೋಮವಾರ ಬೆಳಗ್ಗೆ ಢಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಸ್ಥಳೀಯ ನಿವಾಸಿ ತಿಲಕಂ ಮೃತ ಮಹಿಳೆ.
ಮೃತ ಮಹಿಳೆ ತಿಲಕಂ ಹಾಗೂ ಪುತ್ರ ನಾಗರಾಜ ಸೋಮವಾರ ಬೆಳಗ್ಗೆ ಮನೆಯಿಂದ ಹೊರಟು ರಾ.ಹೆ.66ರ ಚಿತ್ರಾಪುರ ದ್ವಾರದ ಎದುರಿನ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದರು. ಪಶ್ಚಿಮದಿಂದ ಪೂರ್ವದ ಕಡೆಗೆ ರಸ್ತೆ ದಾಟುತ್ತಿದ್ದ ವೇಳೆ ತಿಲಕಂ ಅವರಿಗೆ ಮಂಗಳೂರು ಕಡೆಯಿಂದ ಉಡುಪಿ ಮಾರ್ಗವಾಗಿ ತೆರಳುತ್ತಿದ್ದ ಖಾಸಗಿ ಬಸ್ ಢಿಕ್ಕಿಯಾಗಿದೆ. ಪರಿಣಾಮ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಯಿತು. ಪರೀಕ್ಷಿಸಿದ ವೈದ್ಯರು ಗಾಯಾಳು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.
ಈ ಕುರಿತು ಮಂಗಳೂರು ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.