BREAKING NEWS- ಮಹಾರಾಷ್ಟ್ರ: ಬುಧವಾರವೇ ಬಹುಮತ ಸಾಬೀತುಪಡಿಸಿ; ಸುಪ್ರೀಂ ಆದೇಶ

Update: 2019-11-26 05:45 GMT

ಹೊಸದಿಲ್ಲಿ, ನ.26: ದೇವೇಂದ್ರ ಫಡ್ನವಿಸ್ ನೇತೃತ್ವದ ಮಹಾರಾಷ್ಟ್ರದ ಬಿಜೆಪಿ ಸರಕಾರ ಬುಧವಾರವೇ ಬಹುಮತ ಸಾಬೀತುಪಡಿಸಬೇಕೆಂದು ಸುಪ್ರೀಂಕೋರ್ಟ್ ಮಂಗಳವಾರ ಮಹತ್ವದ ತೀರ್ಪು ನೀಡಿದೆ.

 ವಿಧಾನಸಭೆಗೆ ಹಂಗಾಮಿ ಸ್ಪೀಕರ್ ನೇಮಕ ಮಾಡಬೇಕು. ಬುಧವಾರ ಸಂಜೆ 5 ಗಂಟೆಯೊಳಗೆ ಹಂಗಾಮಿ ಸ್ಪೀಕರ್ ಶಾಸಕರಿಗೆ ಪ್ರಮಾಣವಚನ ಬೋಧಿಸಲಿ. ನಂತರ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಗೌಪ್ಯ ಮತದಾನ ಮಾಡಬಾರದು. ಬಹುಮತದ ಯಾಚನೆ ಪ್ರಕ್ರಿಯೆ ಸಂಪೂರ್ಣವಾಗಿ ವಿಡಿಯೋ ಚಿತ್ರಣವಾಗಬೇಕು, ನೇರ ಪ್ರಸಾರವಾಗಬೇಕು ಎಂದು ನ್ಯಾಯಮೂರ್ತಿಗಳಾದ ಎನ್‌ವಿ ರಮಣ, ಅಶೋಕ್ ಭೂಷಣ್ ಹಾಗೂ ಸಂಜೀವ್ ಖನ್ನಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಆದೇಶಿಸಿದೆ.

ಮಹಾರಾಷ್ಟ್ರದಲ್ಲಿ ಸರಕಾರ ರಚನೆಗೆ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್‌ರನ್ನು ಆಹ್ವಾನಿಸಿರುವ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಕ್ರಮವನ್ನು ಪ್ರಶ್ನಿಸಿ ಶಿವಸೇನಾ,ಕಾಂಗ್ರೆಸ್ ಹಾಗೂ ಎನ್‌ಸಿಪಿ ಮೈತ್ರಿಕೂಟ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸೋಮವಾರ ನಡೆಸಿದ್ದ ಸುಪ್ರೀಂಕೋರ್ಟ್ ಇಂದು ಬೆಳಗ್ಗೆ ಅಂತಿಮ ಆದೇಶವನ್ನು ಕಾಯ್ದಿರಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News