×
Ad

ಅಯೋಧ್ಯೆ ತೀರ್ಪು: ಮರುಪರಿಶೀಲನಾ ಅರ್ಜಿ ಸಲ್ಲಿಸದೇ ಇರಲು ಸುನ್ನಿ ವಕ್ಫ್ ಮಂಡಳಿ ನಿರ್ಧಾರ

Update: 2019-11-26 15:22 IST

ಹೊಸದಿಲ್ಲಿ: ಅಯೋಧ್ಯೆ ವಿವಾದದ ಕುರಿತಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಕುರಿತಂತೆ ಮರುಪರಿಶೀಲನಾ ಅರ್ಜಿ ಸಲ್ಲಿಸದೇ ಇರಲು ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿ ನಿರ್ಧರಿಸಿದೆಯೆಂದು ಮಂಡಳಿಯ ಅಧ್ಯಕ್ಷ ಝುಫರ್ ಫಾರೂಖಿ ಹೇಳಿದ್ದಾರೆ. ಮಂಡಳಿಯ ಸಭೆಯಲ್ಲಿ ಈ ಕುರಿತಂತೆ ನಿರ್ಧಾರ ಕೈಗೊಳ್ಳಲಾಗಿದೆ.

ಸಭೆಯಲ್ಲಿ ಭಾಗವಹಿಸಿದ್ದ ಏಳೆಂಟು ಸದಸ್ಯರ ಪೈಕಿ ಆರು ಮಂದಿ ಮರುಪರಿಶೀಲನಾ ಅರ್ಜಿ ಸಲ್ಲಿಕೆಗೆ ವಿರೋಧ ವ್ಯಕ್ತಪಡಿಸಿದ್ದರು.

ಅಯೋಧ್ಯೆಯಲ್ಲಿ ಮಸೀದಿ ನಿರ್ಮಿಸಲು ಸುಪ್ರೀಂ ಕೋರ್ಟ್ ಹೇಳಿದಂತೆ ಐದು ಎಕರೆ ಜಮೀನು ಸ್ವೀಕರಿಸಬೇಕೇ ಬೇಡವೇ ಎಂಬುದರ ಕುರಿತು ಮಂಡಳಿ ಇನ್ನಷ್ಟೇ ನಿರ್ಧರಿಸಬೇಕಿದೆ. ಈ ವಿಚಾರದ ಕುರಿತಂತೆ ನಿರ್ಧರಿಸಲು ಹೆಚ್ಚು ಸಮಯ ಬೇಕೆಂದು ಹಾಗೂ ಇದು ಶರೀಯತ್ ಪ್ರಕಾರವೇ ಇರಬೇಕಾಗಿದೆ ಎಂದು ಸದಸ್ಯರು  ಭಾವಿಸಿದ್ದಾರೆ ಎಂದು ಫಾರೂಖಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News