ಅಜಿತ್ ಪವಾರ್ ಬೆನ್ನಿಗೇ ಸಿಎಂ ಫಡ್ನವಿಸ್ ರಾಜೀನಾಮೆ ?

Update: 2019-11-26 10:31 GMT

ಮುಂಬೈ, ನ. 26: ಉಪಮುಖ್ಯಮಂತ್ರಿ ಅಜಿತ್ ಪವಾರ್ ರಾಜೀನಾಮೆ ಬೆನ್ನಿಗೇ ಮುಖ್ಯಮಂತ್ರಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರೂ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗಿದೆ.

ಮಂಗಳವಾರ ಸುಪ್ರೀಂ ಕೋರ್ಟ್ ತೀರ್ಪು ಹೊರಬಂದ ಬೆನ್ನಿಗೇ ಪ್ರಧಾನಿ ನರೇಂದ್ರ ಮೋದಿ ಹಾಗು ಗ್ರಹ ಸಚಿವ ಅಮಿತ್ ಶಾ ಅವರು ಮಾತುಕತೆ ನಡೆಸಿದ್ದು ಫಡ್ನವಿಸ್ ಗೆ ಸೂಚನೆ ರವಾನಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಆ ಸೂಚನೆ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮೂಲಗಳ ಪ್ರಕಾರ 3:30 ಕ್ಕೆ ಫಡ್ನವಿಸ್ ಕರೆದಿರುವ ಪತ್ರಿಕಾಗೋಷ್ಠಿಯಲ್ಲೇ ಅವರು ತಮ್ಮ ರಾಜೀನಾಮೆ ಘೋಷಿಸಲಿದ್ದಾರೆ ಎಂದು ಹೇಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News