×
Ad

ಬಿಜೆಪಿ ಪರ ಪ್ರಚಾರ: ಮೂವರು ಕಾಂಗ್ರೆಸ್ ಮುಖಂಡರ ಉಚ್ಚಾಟನೆ

Update: 2019-11-26 18:09 IST

ಬೆಂಗಳೂರು, ನ.26: ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದ ಇಬ್ಬರು ಪಾಲಿಕೆ ಸದಸ್ಯರು ಹಾಗೂ ಓರ್ವ ಕೆಪಿಸಿಸಿ ಸದಸ್ಯನನ್ನು ಕಾಂಗ್ರೆಸ್ ಉಚ್ಚಾಟಿಸಿದೆ.

ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದ ಹೇರೋಹಳ್ಳಿ ವಾರ್ಡ್‌ನ ಬಿಬಿಎಂಪಿ ಸದಸ್ಯ ರಾಜಣ್ಣ, ಹೆಮ್ಮಿಗೆಪುರ ವಾರ್ಡ್‌ನ ಸದಸ್ಯ ಆರ್ಯ ಶ್ರೀನಿವಾಸ್ ಮತ್ತು ಬೊಮ್ಮನಹಳ್ಳಿ ವಾರ್ಡ್‌ನ ಬಿಳೇಕಹಳ್ಳಿ ಬ್ಲಾಕ್ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಸದಸ್ಯ ಪಟೇಲ್ ರಾಜು ಅವರನ್ನು ಆರು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಈ ಉಚ್ಚಾಟಿತ ಮೂವರು ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಸ್.ಟಿ. ಸೋಮಶೇಖರ್ ಅವರ ಪರ ಕ್ಷೇತ್ರದಲ್ಲಿ ಪ್ರತ್ಯಕ್ಷವಾಗಿ ಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಸೂಚನೆ ಮೇರೆಗೆ ಈ ಮೂವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಜಿ ಶಫೀವುಲ್ಲಾ ಅವರು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಕೆ.ಆರ್. ಪುರಂ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬೈರತಿ ಬಸವರಾಜ ಪರ ಪ್ರಚಾರದಲ್ಲಿ ತೊಡಗಿದ್ದ ಬಿಬಿಎಂಪಿಯ ನಾಲ್ವರು ಕಾಂಗ್ರೆಸ್ ಸದಸ್ಯರನ್ನು ಉಚ್ಚಾಟಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News