×
Ad

ಅಂಬೇಡ್ಕರ್ ಅಂತ್ಯಕ್ರಿಯೆಗೂ ಕಾಂಗ್ರೆಸ್ ಜಾಗ ನೀಡಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್

Update: 2019-11-26 19:13 IST

ಬೆಳಗಾವಿ, ನ.26: ಸಂವಿಧಾನ ಶಿಲ್ಪಿ ಅಂಬೇಡ್ಕರ್‌ರಿಗೆ ಕಾಂಗ್ರೆಸ್ ಸಾಕಷ್ಟು ಅವಮಾನ ಮಾಡಿದ್ದು, ಅವರ ಅಂತ್ಯಕ್ರಿಯೆಗೂ ಜಾಗವನ್ನು ನೀಡಿರಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಂದಿಲ್ಲಿ ಆರೋಪಿಸಿದ್ದಾರೆ.

ಜಿಲ್ಲೆಯ ಅಥಣಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಆಗಮಿಸಿದ್ದ ಅವರು ಅಂಬೇಡ್ಕರ್ ಫೋಟೋಗೆ ನಮನ ಸಲ್ಲಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಂಬೇಡ್ಕರ್ ಕೊಡುಗೆ ಅಪಾರ ಎಂದು ಸ್ಮರಿಸಿದರು.

ಕಾಂಗ್ರೆಸ್ ದಿನನಿತ್ಯ ಅಂಬೇಡ್ಕರ್ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಆದರೆ, ಅವರ ಸಾವಿನಲ್ಲಿಯೂ ಅಪಮಾನ ಮಾಡಿದೆ ಎಂಬುದನ್ನು ಮರೆಯಬಾರದು ಎಂದ ಅವರು, ಇಂದಿರಾಗಾಂಧಿಯು ಸಂವಿಧಾನವನ್ನು ಕಗ್ಗೂಲೆ ಮಾಡಿ ತುರ್ತು ಪರಿಸ್ಥಿತಿಯನ್ನು ಹೇರಿಕೆ ಮಾಡಿದ್ದರು ಎಂದು ಟೀಕಿಸಿದರು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ್ ಸವದಿ, ಗೋವಿಂದ ಕಾರಜೋಳ, ಸಂಸದ ಭಗವಂತ ಖೂಬಾ ಸಾಥ್ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News