ಪಾಕ್ ಸೇನಾ ಮುಖ್ಯಸ್ಥರ ಅವಧಿ ವಿಸ್ತರಣೆಗೆ ಸುಪ್ರೀಂ ಕೋರ್ಟ್ ತಡೆ

Update: 2019-11-26 15:42 GMT

ಇಸ್ಲಾಮಾಬಾದ್, ನ. 26: ಪಾಕಿಸ್ತಾನಿ ಸೇನಾ ಮುಖ್ಯಸ್ಥರ ಅಧಿಕಾರಾವಧಿ ವಿಸ್ತರಣೆಯನ್ನು ಆ ದೇಶದ ಸುಪ್ರೀಂ ಕೋರ್ಟ್ ಮಂಗಳವಾರ ಅಮಾನತಿನಲ್ಲಿಟ್ಟಿದೆ.

ಪ್ರಧಾನಿ ಇಮ್ರಾನ್ ಖಾನ್ ಆಗಸ್ಟ್ 19ರಂದು ಸೇನಾ ಜನರಲ್ ಕಮರ್ ಜಾವೇದ್ ಬಾಜ್ವರ ಅಧಿಕಾರಾವಧಿಯನ್ನು ಮೂರು ವರ್ಷಗಳ ಕಾಲ ವಿಸ್ತರಿಸಿದ್ದರು. ಕಾಶ್ಮೀರ ವಿವಾದಕ್ಕೆ ಸಂಬಂಧಿಸಿ ಭಾರತದೊಂದಿಗೆ ಉದ್ವಿಗ್ನತೆ ತಲೆದೋರಿರುವ ಕಾರಣವನ್ನೊಡ್ಡಿ ಅವರು ಈ ಆದೇಶವನ್ನು ಹೊರಡಿಸಿದ್ದರು.

ಕಳೆದ ವರ್ಷದ ನಡೆದ ಚುನಾವಣೆಯಲ್ಲಿ ಇಮ್ರಾನ್ ಖಾನ್ ಅಧಿಕಾರಕ್ಕೆ ಬರುವುದಕ್ಕಾಗಿ ಬಾಜ್ವ ನೇತೃತ್ವದ ಸೇನೆಯು ಚುನಾವಣೆಯಲ್ಲಿ ಅಕ್ರಮ ನಡೆಸಿತ್ತು ಎಂದು ಪ್ರತಿಪಕ್ಷ ನಾಯಕರು ಆರೋಪಿಸಿದ್ದಾರೆ.

ಇಮ್ರಾನ್ ಸರಕಾರ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಸೇನೆಯು ವಿವರವಾದ ವಾದ ಮಂಡಿಸುವವರೆಗೆ ಈ ನಿರ್ಧಾರವನ್ನು ನ್ಯಾಯಾಲಯ ಅಮಾನತಿನಲ್ಲಿಡುತ್ತದೆ ಎಂದು ಮಂಗಳವಾರ ನಡೆದ ವಿಚಾರಣೆಯಲ್ಲಿ ಪಾಕಿಸ್ತಾನದ ಮುಖ್ಯ ನ್ಯಾಯಾಧೀಶ ಆಸಿಫ್ ಸಯೀದ್ ಖೋಸ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News