"ಹಿಂದುಳಿದ ವರ್ಗಗಳ ವಿದ್ಯಾರ್ಥಿ ವೇತನವನ್ನು ಬಿಎಸ್‌ವೈ ಉಪಚುನಾವಣೆಗೆ ಬಳಸುತ್ತಿದ್ದಾರೆ"

Update: 2019-11-26 16:27 GMT

ಮೈಸೂರು,ನ.26: ಹಿಂದುಳಿದ ವರ್ಗಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವನ್ನು ನಿಲ್ಲಿಸಿ ಅದರ ಹಣವನ್ನು ಉಪಚುನಾವಣೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಳಸಿಕೊಳ್ಳುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ಆರೋಪಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ವಿದ್ಯಾರ್ಥಿ ವೇತನ ನೀಡಲಾಗುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಅದನ್ನು ಹಿಂಪಡೆದು ಹಿಂದುಳಿದ ವರ್ಗಗಳ ಜನರಿಗೆ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News