ಐಟಿ ದಾಳಿ ಪ್ರಕರಣ: ಜನಪ್ರತಿನಿಧಿಗಳ ಕೋರ್ಟ್‌ಗೆ ಹಾಜರಾದ ಡಿಕೆಶಿ

Update: 2019-11-26 16:56 GMT

ಬೆಂಗಳೂರು, ನ.26: ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣದಿಂದ ತಮ್ಮ ಹೆಸರು ಕೈಬಿಡಲು ಕೋರಿ ಮಂಗಳವಾರ ಜನಪ್ರತಿನಿಧಿಗಳ ಕೋರ್ಟ್‌ಗೆ ಮಾಜಿ ಸಚಿವ ಡಿಕೆಶಿ ಹಾಜರಾದರು. ಆದರೆ, ಕೋರ್ಟ್ ವಿಚಾರಣೆಯನ್ನು ಡಿ.12ಕ್ಕೆ ಮುಂದೂಡಿತು. 

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಾಜಿ ಸಚಿವ ಡಿಕೆಶಿ ಮನೆ ಮೇಲೆ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ದೂರು ದಾಖಲಿಸಿದ್ದರು. ಪ್ರಕರಣದಲ್ಲಿರುವ ಡಿಕೆಶಿ ಹಾಗೂ ಆಪ್ತರ ಹೆಸರುಗಳೂ ಇದ್ದವು. ಪ್ರಕರಣದಲ್ಲಿರುವ ತಮ್ಮ ಹೆಸರು ಕೈಬಿಡುವಂತೆ ಡಿಕೆಶಿ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.

ಡಿಕೆಶಿ ಸಚಿವರಾಗಿದ್ದ ವೇಳೆ ಅವರ ಮನೆ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಹೈಕೋರ್ಟ್ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿತ್ತು, ಈ ಹಿನ್ನೆಲೆಯಲ್ಲಿ ಡಿಕೆಶಿ ಜನಪ್ರತಿನಿಧಿಗಳ ಕೋರ್ಟ್‌ಗೆ ಹಾಜರಾಗಿದ್ದರು. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಡಿಕೆಶಿಯನ್ನು ಸೆ.3ರಂದು ಬಂಧಿಸಿತ್ತು.

ಇದಕ್ಕೂ ಮೊದಲು ಆ.30ರಿಂದ ಸತತ ನಾಲ್ಕು ದಿನ ವಿಚಾರಣೆಗೆ ಒಳಪಡಿಸಿತ್ತು. ಬಳಿಕ ಅವರನ್ನು ವಿಶೇಷ ನ್ಯಾಯಾಲಯವು ಇ.ಡಿ ವಶಕ್ಕೆ ಒಪ್ಪಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News