ಗುಣಮಟ್ಟದ ಹಾಲು ಉತ್ಪಾದಿಸುವಲ್ಲಿ ಕೆಎಂಎಫ್ ಸುಧಾರಿತ ಕ್ರಮ: ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ್

Update: 2019-11-26 17:06 GMT

ಬೆಂಗಳೂರು, ನ.26: ಗ್ರಾಹಕರಿಗೆ ಗುಣಮಟ್ಟದ ಹಾಲು ಉತ್ಪಾದಿಸುವಲ್ಲಿ ಕರ್ನಾಟಕ ಹಾಲು ಒಕ್ಕೂಟಗಳ ಮಹಾಮಂಡಳ (ಕೆಎಂಎಫ್) ಸುಧಾರಿತ ಕ್ರಮಗಳನ್ನು ಅನುಸರಿಸಿದೆ ಎಂದು ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ್ ಹೇಳಿದ್ದಾರೆ.

ಭಾರತೀಯ ಕೃಷಿ ಅನುಸಂಧಾನ ಪರಿಷತ್ (ಐಸಿಎಆರ್) ಹಾಗೂ ರಾಷ್ಟ್ರೀಯ ಪಶು ಪೋಷಣೆ ಮತ್ತು ಶಾರೀರಿಕ ವಿಜ್ಞಾನ ಸಂಸ್ಥೆ (ಎನ್‌ಐಎಎನ್‌ಪಿ), ಭಾರತೀಯ ಡೈರಿ ಸಂಘ ಹಾಗೂ ಕೆಎಂಎಫ್ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ರಾಷ್ಟ್ರೀಯ ಕ್ಷೀರ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಂತ್ರಜ್ಞಾನ ಆಧರಿತ ಹೈನುಗಾರಿಕೆ ವಿಧಾನ ಅನುಸರಿಸುವುದರಿಂದ ರೈತರು ಹೆಚ್ಚಿನ ಲಾಭ ಪಡೆಯಬಹುದು. ಇದಕ್ಕಾಗಿ ಸಂಸ್ಥೆಯ ಸಹಕಾರ ಪಡೆಯಬಹುದು ಎಂದು ಅವರು ರೈತರಿಗೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಪ್ರಗತಿಪರ ಹೈನುಗಾರಿಕೆ ಮಾಡುವ ರೈತರಿಗೆ ಗುಣಮಟ್ಟದ ಹಾಲು ಉತ್ಪಾದನೆಗೆ ರೈತ ಸ್ನೇಹಿ ನವೀನ ತಂತ್ರಜ್ಞಾನಗಳ ಮಾಹಿತಿ ನೀಡುವ ತಾಂತ್ರಿಕಗೋಷ್ಠಿ ಆಯೋಜಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News