ಕಡಬ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ ಮೃತ್ಯು

Update: 2019-11-27 05:25 GMT

ಕಡಬ, ನ.27: ಕಡಬದ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಯುವತಿಯೋರ್ವಳು ಮಂಗಳವಾರ  ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

 ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಹರಿಮಜಲು ನಿವಾಸಿ ಶ್ರೀಧರ ಗೌಡ ಎಂಬವರ ಪುತ್ರಿ ಸವಿತಾ ಮೃತಪಟ್ಟವರು. ಮಂಗಳವಾರ ವಿಷ ಸೇವಿಸಿದ್ದ ಸವಿತಾರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News