ಅಯೋಧ್ಯೆ ತೀರ್ಪು: ಮರು ಪರಿಶೀಲನಾ ಅರ್ಜಿ ಸಲ್ಲಿಸುವುದಾಗಿ ಹೇಳಿದ ಎಐಎಂಪಿಎಲ್‌ಬಿ

Update: 2019-11-27 09:17 GMT

ಹೊಸದಿಲ್ಲಿ : ಅಯೋಧ್ಯೆ ವಿವಾದ ಕುರಿತಂತೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿರುವ ತೀರ್ಪಿಗೆ ಮರು ಪರಿಶೀಲನಾ ಅರ್ಜಿಯನ್ನು ಮುಂದಿನ ತಿಂಗಳು ಸಲ್ಲಿಸುವುದಾಗಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ಬುಧವಾರ ಹೇಳಿದೆ.

"ನಮ್ಮ ಸಂವಿಧಾನದತ್ತವಾದ ಹಕ್ಕುಗಳನ್ನು ಚಲಾಯಿಸಿ ನಾವು ಬಾಬ್ರಿ ಮಸೀದಿ ಪ್ರಕರಣದಲ್ಲಿ ಮರು ಪರಿಶೀಲನಾ ಅರ್ಜಿಯನ್ನು ಡಿಸೆಂಬರ್ ಮೊದಲ ವಾರದಲ್ಲಿ ಸಲ್ಲಿಸುತ್ತೇವೆ,'' ಎಂದು  ಮಂಡಳಿ ಟ್ವೀಟ್ ಮಾಡಿದೆ.

"ಮರು ಪರಿಶೀಲನಾ ಅರ್ಜಿ ಸಲ್ಲಿಸುವುದಿಲ್ಲ ಎಂಬ ಸುನ್ನಿ ವಕ್ಫ್ ಮಂಡಳಿಯ ತೀರ್ಮಾನ  ತಮ್ಮ ಮೇಲೆ ಕಾನೂನಾತ್ಮಕವಾಗಿ ಯಾವುದೇ ಪರಿಣಾಮ ಬೀರುವುದಿಲ್ಲ, ಎಲ್ಲಾ ಮುಸ್ಲಿಂ ಸಂಘಟನೆಗಳೂ ಈ ವಿಚಾರದಲ್ಲಿ ಒಂದೇ ಅಭಿಪ್ರಾಯ ಹೊಂದಿವೆ,'' ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿದೆ.

ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿ ಮಂಗಳವಾರದಂದು ತಾನು ಮರು ಪರಿಶೀಲನಾ ಅರ್ಜಿ ಸಲ್ಲಿಸುವುದಿಲ್ಲವೆಂದೂ ಹಾಗೂ ಮಸೀದಿ ನಿರ್ಮಿಸಲು ನೀಡಲಾಗುವುದೆಂದು ಹೇಳಲಾದ ಐದು ಎಕರೆ ಪರ್ಯಾಯ ಭೂಮಿಯನ್ನು ಒಪ್ಪಬೇಕೇ ಅಥವಾ ಬೇಡವೇ ಎಂಬ ಬಗ್ಗೆ ತೀರ್ಮಾನವನ್ನು ಇನ್ನೂ ಕೈಗೊಳ್ಳಲಾಗಿಲ್ಲ ಎಂದು ತಿಳಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News