ಉಪಚುನಾವಣೆಯಲ್ಲಿ ಜಾರಕಿಹೊಳಿ ಕುಟುಂಬ ಎರಡು ಭಾಗ ಆಗಲೇಬೇಕು: ಸತೀಶ್ ಜಾರಕಿಹೊಳಿ
Update: 2019-11-27 21:57 IST
ಬೆಳಗಾವಿ, ನ. 27: ರಮೇಶ್ ಜಾರಕಿಹೊಳಿ ಮುಂಬೈನಲ್ಲಿ 25 ಕೋಟಿ ರೂ., ಗೋಕಾಕ್‌ನಲ್ಲಿ 15 ಕೋಟಿ ರೂ.ಸೇರಿದಂತೆ ಒಟ್ಟು 40 ಕೋಟಿ ರೂ.ಗಳನ್ನು ವಸೂಲಿ ಮಾಡಿದ್ದು, ಈ ಉಪಚುನಾವಣೆಯಲ್ಲಿ ಜಾರಕಿಹೊಳಿ ಕುಟುಂಬ ಎರಡು ಭಾಗ ಆಗಲೇಬೇಕು ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದರು.
ಬುಧವಾರ ಗೋಕಾಕ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಅತ್ಯಂತ ಹೆಚ್ಚು ಅನುದಾನವನ್ನು ತಂದವರು ರಮೇಶ್ ಮತ್ತು ಬಾಲಚಂದ್ರ. ಇದೀಗ ಇಬ್ಬರು ತಕ್ಕಡಿ ಹಿಡಿದು ವ್ಯಾಪಾರಕ್ಕೆ ನಿಂತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.