ರಾಜ್ಯಮಟ್ಟದ ನೆಟ್‌ಬಾಲ್ ಪಂದ್ಯಾಟ : ಎಂ.ಸಪ್ರೀನ್ ರಾಷ್ಟ್ರಮಟ್ಟಕ್ಕೆ ಆಯ್ಕೆ
Update: 2019-11-27 22:33 IST
ಮಂಗಳೂರು, ನ.27: ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟವು ಕೋಲಾರದಲ್ಲಿ ಇತ್ತೀಚೆಗೆ ಆಯೋಜಿಸಲಾಗಿತ್ತು. ನೆಟ್‌ಬಾಲ್ ಪಂದ್ಯಾವಳಿಯಲ್ಲಿ ದ.ಕ. ಜಿಲ್ಲಾ ಬಾಲಕಿಯರ ತಂಡವು ಪ್ರಥಮ ಸ್ಥಾನ ಗಳಿಸಿದ್ದು, ಗುರುಕಂಬಳದ ಎ.ಕೆ.ಯು.ಬಾಲಕಿಯರ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಂ. ಸಪ್ರೀನ್ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.