ತಿತಿಮತಿಯಲ್ಲಿ ಕಾಡಾನೆಗಳ ಹಿಂಡು: ಗ್ರಾಮಸ್ಥರಲ್ಲಿ ಆತಂಕ

Update: 2019-11-27 17:48 GMT

ಮಡಿಕೇರಿ, ನ.27: ದಕ್ಷಿಣ ಕೊಡಗಿನಲ್ಲಿ ವನ್ಯಜೀವಿಗಳ ಉಪಟಳ ಹೆಚ್ಚಾಗಿದ್ದು, ಹುಲಿದಾಳಿಯ ನಡುವೆಯೇ ಇದೀಗ ತಿತಿಮತಿ ಭಾಗದಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದೆ.

ಗ್ರಾ.ಪಂ ಕಚೇರಿ ಸಮೀಪದ ಎಡತೊರೆ ಎಂಬಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕವನ್ನು ಮೂಡಿಸಿದೆ. ಒಂದು ತೋಟದಿಂದ ಮತ್ತೊಂದು ತೋಟಕ್ಕೆ ಆನೆಗಳು ಸಂಚರಿಸುತ್ತಿರುವುದರಿಂದ ಕಾಫಿ ಗಿಡಗಳಿಗೆ ಹಾನಿಯಾಗಿದೆ. ತಕ್ಷಣ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಹುಲಿ ಹಾಗೂ ಕಾಡಾನೆಗಳ ಉಪಟಳವನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ರೈತ ಸಂಘ ಹಾಗೂ ದಕ್ಷಿಣ ಕೊಡಗಿನ ವಿವಿಧ ಗ್ರಾಮಸ್ಥರು ಒತ್ತಾಯಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News