×
Ad

ಉಡುಪಿ ಜಿಲ್ಲಾ ವಿಶೇಷ ಮಕ್ಕಳ ಕ್ರೀಡೋತ್ಸವ ಉದ್ಘಾಟನೆ

Update: 2019-11-28 19:46 IST

 ಶಿರ್ವ, ನ.28: ವಿಶ್ವ ವಿಕಲಚೇತನ ದಿನಾಚರಣೆಯ ಪ್ರಯುಕ್ತ ಪೂರ್ವ ಭಾವಿಯಾಗಿ ಬಂಟಕಲ್ಲು ಪಾಂಬೂರು ಮಾನಸ ವಿಶೇಷ ಮಕ್ಕಳ ಪುನರ್ವಸತಿ ಮತ್ತು ತರಬೇತಿ ಸಂಸ್ಥೆಯ ಕ್ರೀಡಾಂಗಣದಲ್ಲಿ ಗುರುವಾರ ಆಯೋಜಿಸಲಾದ ಉಡುಪಿ ಜಿಲ್ಲಾ ವಿಶೇಷ ಮಕ್ಕಳ ಕ್ರೀಡೋತ್ಸವವನ್ನು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ, ವಿಶೇಷ ಮಕ್ಕಳ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಾನು ಪ್ರಥಮ ಆದ್ಯತೆ ನೀಡುತ್ತೇನೆ. ಎಲ್ಲಾ ಮಕ್ಕಳು ಸ್ಫರ್ಧೆ ಯಲ್ಲಿ ಭಾಗವಹಿಸುವಂತೆ ಮಾಡಬೇಕು. ಸಂಘಟಕರು ಕೇವಲ ಸ್ಫರ್ಧಾ ವಿಜೇತ ರಿಗೆ ಮಾತ್ರವಲ್ಲ ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಬೇು ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್, ಉಡುಪಿ ಜಿಪಂ ಸದಸ್ಯ ವಿಲ್ಸನ್ ರೊಡ್ರಿಗಸ್ ಮಾತನಾಡಿದರು. ಅಧ್ಯಕ್ಷತೆಯನ್ನು ಮಾನಸ ಸಂಸ್ಥೆಯ ಅಧ್ಯಕ್ಷ ಹೆನ್ರಿ ಮಿನೇಜಸ್ ವಹಿಸಿದ್ದರು.

ವಿಕಲಚೇತನ ಮತ್ತು ಹಿರಿಯ ನಾಗರೀಕರ ಸಬಲೀಕರಣ ಅಧಿಕಾರಿ ಚಂದ್ರ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಥೆಯ ಕಾರ್ಯದರ್ಶಿ ಜೋಸೆಪ್ ನೊರೋನ್ಹಾ, ಮುಖ್ಯ ಶಿಕ್ಷಕಿ ಅನ್ಸಿಲ್ಲಾ ಫೆರ್ನಾಂಡಿಸ್ ಉಪಸ್ಥಿತರಿದ್ದು, ಡಾ.ಕಾಂತಿ ಹರೀಶ್ ವಂದಿಸಿದರು.

ದೈಹಿಕ ಶಿಕ್ಷಣ ಶಿಕ್ಷಕರಾದ ಸುರೇಶ ದೇವಾಡಿಗ ಪಡುಬೆಳ್ಳೆ, ಸೋಮಶೇಖರ್ ಇಂದಿರಾನಗರ, ಸತೀಶ ಸಾಲಿಯಾನ್ ಮಣಿಪುರ ಸಹಕರಿಸಿದರು. ಅಂತಾ ರಾಷ್ಟ್ರೀಯ ಕ್ರೀಡಾಪಟು ಅರ್ಚನಾ ಜೆ. ಕ್ರೀಡಾಜ್ಯೋತಿಯನ್ನು ಬೆಳಗಿಸಿದರು. ಪಥಸಂಚಲನದಲ್ಲಿ ವಿಜೇತರಾದ ಪ್ರಥಮ ಕಾರ್ಕಳ, ದ್ವಿತೀಯ ಮಾನಸ ಪಾಂಬೂರು ಹಾಗೂ ತೃತೀಯ ಆಶಾ ನಿಲಯ ತಂಡಕ್ಕೆ ಜಿಲ್ಲಾಧಿಕಾರಿ ಬಹುಮಾನ ವಿತರಿಸಿದರು. ಜಿಲ್ಲೆಯ 15 ವಿಶೇಷ ಮಕ್ಕಳ ಶಾಲೆಗಳ ಸುಮಾರು 350 ಕ್ರೀಡಾಪಟುಗಳು ಸ್ಫರ್ದೆಯಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News