×
Ad

ನ.29ರಂದು ನಿವೇಶನ ರಹಿತರ ಬೇಡಿಕೆ ಕುರಿತು ಜಂಟಿ ಸಭೆ

Update: 2019-11-28 19:52 IST

 ಉಡುಪಿ, ನ.28: ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘ ಉಡುಪಿ ಜಿಲ್ಲಾ ಸಮಿತಿ ಮತ್ತು ನಿವೇಶನ ರಹಿತರ ಹೋರಾಟ ಸಮಿತಿ ಮನೆ, ನಿವೇಶನ ರಹಿತರು ನಿವೇಶನಕ್ಕಾಗಿ ಇತ್ತೀಚೆಗೆ ನಡೆಸಿದ ಹೋರಾಟದ ಹಿನ್ನೆಲೆಯಲ್ಯ್ ಜಿಲ್ಲಾಧಿಕಾರಿ ನೀಡಿದ ಭರವಸೆಯಂತೆ ಈ ಕುರಿತು ಚರ್ಚಿಸಲು ನ.29ರಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಂಟಿ ಸಭೆಯನ್ನು ಕರೆಯಲಾಗಿದೆ.

ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಕಂದಾಯ ಇಲಾಖೆ, ಗ್ರಾಮೀಣ ಅಭಿವೃದ್ಧಿ ಪಂಚಾಯತ್‌ರಾಜ್ ಇಲಾಖೆ ಹಾಗೂ ಪೌರಾ ಯುಕ್ತರು, ಮುಖ್ಯಾಧಿಕಾರಿಗಳು ಮತ್ತು ಕೃಷಿಕೂಲಿಕಾರರ ಸಂಘದ ಮುಖಂಡರು ಭಾಗವಹಿಸಲಿರುವರು. ಇದರಲ್ಲಿ ನಿವೇಶನ ರಹಿತರ ಭೂಮಿ ಹಕ್ಕಿನ ಬೇಡಿಕೆ ಈಡೇರಿಸುವ ಕುರಿತು ಚರ್ಚಿಸಲಾಗುವುದು ಎಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News