×
Ad

ಕೆಥೊಲಿಕ್ ಸಭಾದಿಂದ ‘ಸಮುದಾಯೋತ್ಸವ’ ಕರಪತ್ರ ಬಿಡುಗಡೆ

Update: 2019-11-28 21:48 IST

ಉಡುಪಿ, ನ.28: ಕೆಥೋಲಿಕ್ ಸಭೆ ಉಡುಪಿ ಪ್ರದೇಶ್ ವತಿಯಿಂದ ಮುಂದಿನ ಜ.19ರಂದು ಕಲ್ಯಾಣಪುರ ವೌಂಟ್ ರೋಸರಿ ಚರ್ಚಿನ ಆವರಣದಲ್ಲಿ ಆಯೋಜಿಸಿರುವ ಧರ್ಮಪ್ರಾಂತ ಮಟ್ಟದ ಶ್ರೀಸಾಮಾನ್ಯರ ಸಮ್ಮೇಳನ ‘ಸಮುದಾಯೋತ್ಸವ್-2020’ರ ಕಾರ್ಯಾಲಯ ಹಾಗೂ ಕರಪತ್ರ ಅನಾವರಣಕಾರ್ಯಕ್ರಮಗುರುವಾರ ಸಂಘಟನೆ ಸಭಾಭವನದಲ್ಲಿ ಜರಗಿತು.

ಸಮುದಾಯೋತ್ಸವ್‌ನ ಕಾರ್ಯಾಲಯವನ್ನು ಖ್ಯಾತ ಉದ್ಯಮಿ ಜೆರ್ರಿ ವಿನ್ಸೆಂಟ್ ಡಾಯಸ್ ಮತ್ತು ಕರಪತ್ರವನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ಉದ್ಯಮಿ ಪ್ರಖ್ಯಾತ್ ಶೆಟ್ಟಿ ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಖ್ಯಾತ್ ಶೆಟ್ಟಿ, ಕ್ರೈಸ್ತ ಸಮುದಾಯ ತನ್ನ ಶಾಂತಿ ಮತ್ತು ಪ್ರೀತಿಯ ಸೇವೆಯಿಂದಾಗಿ ಪ್ರತಿಯೊಬ್ಬರ ಜೊತೆಗೆ ಬೆರೆತು ಬಾಳುತ್ತಿದೆ. ಕ್ರೈಸ್ತ ಸಮುದಾಯ ಸಮಾಜದಲ್ಲಿ ಸದಾ ಶಾಂತಿಯನ್ನು ಬಯಸುವ ಸಮುದಾಯ ವಾಗಿದ್ದು, ಈ ಮೂಲಕ ಸೌಹಾರ್ದಯುತ ಸಮಾಜ ಕಟ್ಟುವಲ್ಲಿ ಶ್ರಮಿಸಲಿ. ಸಮುದಾಯೋತ್ಸವದ ಮೂಲಕ ಕ್ರೈಸ್ತ ಸಮುದಾಯದ ಶ್ರೀಸಾಮಾನ್ಯ ರನ್ನು ಒಗ್ಗೂಡಿಸುವ ಮೂಲಕ ಸಮುದಾಯದ ಒಗ್ಗಟ್ಟು ಮತ್ತು ಸೌಹಾರ್ದತೆ ಮೂಡಿಸಲಿ ಎಂದು ಹಾರೈಸಿದರು
ಸಮ್ಮೇಳನದಲ್ಲಿ ಉಡುಪಿ ಧರ್ಮಪ್ರಾಂತ ವ್ಯಾಪ್ತಿಯ ಕೆಥೊಲಿಕ್ ಸಮುದಾಯದ ಸುಮಾರು 5,000 ಮಂದಿ ಭಾಗವಹಿಸಲಿದ್ದು, ಆರು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಹಾಗೂ ಜೀವಮಾನ ವಿಶೇಷ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಗುವುದು.

ಕಾರ್ಯಕ್ರಮದಲ್ಲಿ ಕೆಥೊಲಿಕ್ ಸಭಾ ಉಡುಪಿ ಪ್ರದೇಶ್‌ನ ಅಧ್ಯಕ್ಷ ಆಲ್ವಿನ್ ಕ್ವಾಡ್ರಸ್, ಕಾರ್ಯದರ್ಶಿ ಸಂತೋಷ್ ಕರ್ನೆಲಿಯೋ, ಸಮ್ಮೇಳನದ ಸಂಚಾಲಕ ಎಲ್ರೋಯ್ ಕಿರಣ್ ಕ್ರಾಸ್ತಾ, ನಿಕಟಪೂರ್ವ ಅಧ್ಯಕ್ಷ ವಲೇರಿಯನ್ ಫೆರ್ನಾಂಡಿಸ್, ಮಾಜಿ ಅಧ್ಯಕ್ಷ ಆಲ್ಫೋನ್ಸ್ ಡಿಕೋಸ್ತಾ, ವಾಲ್ಟರ್ ಸಿರಿಲ್ ಪಿಂಟೊ, ಡಾ.ಜೆರಾಲ್ಡ್ ಪಿಂಟೊ ಮುಂತಾದವರು ಉಪಸ್ಥಿತರಿದ್ದರು. ಆಲ್ವಿನ್ ಕ್ವಾಡ್ರಸ್ ಸ್ವಾಗತಿಸಿ, ಸಮುದಾಯೋತ್ಸವ ಸಮಿತಿಯ ಕಾರ್ಯದರ್ಶಿ ಮೇರಿ ಡಿಸೋಜಾ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News