×
Ad

ಉಡುಪಿ: ಅಂತರ್ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

Update: 2019-11-28 21:55 IST

ಉಡುಪಿ, ನ.28: ಕರ್ನಾಟಕ ರಾಜ್ಯ ಉಪವಲಯ ಅರಣ್ಯಾಧಿಕಾರಿಗಳ ಸಂಘ ಉಡುಪಿ ಜಿಲ್ಲೆ ಇವರ ವತಿಯಿಂದ ಅಂತರ್ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯು ಡಿ.1ರಂದು ಬೆಳಗ್ಗೆ 10 ಗಂಟೆಗೆ ಉಡುಪಿ ಶ್ರೀಕೃಷ್ಣಮಠದ ರಾಜಾಂಗಣದ ಮೆೀಲ್ಛಾವಣಿ ಸಭಾಂಗಣದಲ್ಲಿ ನಡೆಯಲಿದೆ.

ಕಿರಿಯ ಪ್ರಾಥಮಿಕ ವಿಭಾಗ (1ರಿಂದ 4ನೇ ತರಗತಿ), ಹಿರಿಯ ಪ್ರಾಥಮಿಕ ವಿಭಾಗ (5ರಿಂದ 7ನೇ ತರಗತಿ) ಹಾಗೂ ಪ್ರೌಢಶಾಲಾ ವಿಭಾಗ (8ರಿಂದ 10ನೇ ತರಗತಿ)ಗಳಲ್ಲಿ ಸ್ಪರ್ಧೆ ನಡೆಯಲಿದ್ದು, ಸ್ಪರ್ಧಿಗಳಿಗೆ ಪೇಪರ್‌ನ್ನು ಸ್ಥಳದಲ್ಲಿ ನೀಡಲಾಗು ವುದು. ಚಿತ್ರ ಬಿಡಿಸುವ ಪರಿಕರಗಳನ್ನು ವಿದ್ಯಾರ್ಥಿಗಳೇ ತರತಕ್ಕದ್ದು.

ವಿದ್ಯಾರ್ಥಿಗಳು ತಮ್ಮ ಶಾಲೆಯ ಮುಖ್ಯ ಶಿಕ್ಷಕರ ದೃಢೀಕರಣ ಪತ್ರವನ್ನು ಕಡ್ಡಾಯವಾಗಿ ತರಬೇಕು ಎಂದು ಕರ್ನಾಟಕ ರಾಜ್ಯ ಉಪವಲಯ ಅರಣ್ಯಾಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News