×
Ad

ಕೆಲಸಕ್ಕೆಂದು ತೆರಳಿದ ಯುವತಿ ನಾಪತ್ತೆ

Update: 2019-11-28 22:05 IST

 ಉಡುಪಿ, ನ.28: ಬೈಂದೂರು ತಾಲೂಕು ಜಡ್ಕಲ್ ಗ್ರಾಮದ ವಾಟೆಗುಂಡಿ ನಿವಾಸಿ ಪ್ರಮೋದಿನಿ (19 ವರ್ಷ) ಎಂಬುವವರು ಜಡ್ಕಲ್‌ನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸೇವಾ ಪ್ರತಿನಿಧಿಯಾಗಿ ಕೆಲಸ ಮಾಡಿಕೊಂಡಿದ್ದು, ಇತ್ತೀಚೆಗೆ ಜಡ್ಕಲ್‌ಗೆ ಕೆಲಸಕ್ಕೆಂದು ತೆರಳಿದವರು ವಾಪಾಸು ಮನೆಗೆ ಬಾರದೇ ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿದ್ದಾರೆ.

ಇವರು 5 ಅಡಿ 2 ಇಂಚು ಎತ್ತರವಿದ್ದು, ಗೋಧಿ ಮೈಬಣ್ಣ ಹೊಂದಿದ್ದಾರೆ. ಕನ್ನಡ, ಹಿಂದಿ ಭಾಷೆ ತಿಳಿದಿದ್ದು, ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News