ನ. 30ರಂದು ಕೇಂದ್ರ ಹಣಕಾಸು ಸಚಿವರ ಪ್ರವಾಸ
Update: 2019-11-29 19:56 IST
ಮಂಗಳೂರು, ನ. 29: ಕೇಂದ್ರ ಹಣಕಾಸು ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೋರ್ ನ.30ರಂದು ದ.ಕ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ನ.30ರಂದು ಬೆಳಗ್ಗೆ 11:35ಕ್ಕೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 1:30ಕ್ಕೆ ನಗರದ ಟಿಎಂಎ ಪೈ ಇಂಟರ್ ನ್ಯಾಷನಲ್ ಸೆಂಟರ್‌ನಲ್ಲಿ ನಡೆಯುವ ಮಂಗಳೂರು ಲಿಟ್ ಫೆಸ್ಟ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 3:30ಕ್ಕೆ ಜಿಎಸ್‌ಟಿ ಸಭೆಯಲ್ಲಿ ಭಾಗವಹಿಸುವರು. ರಾತ್ರಿ 7:30ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದಾರೆ.