ಪಿ.ಎ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಾಹಿತಿ ಕಾರ್ಯಾಗಾರ

Update: 2019-11-29 17:25 GMT

ಕೊಣಾಜೆ: ಪಿ.ಎ.ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ವತಿಯಿಂದ “ಎನರ್ಜಿ ಲಾಸಸ್ ಮತ್ತು ಎನರ್ಜಿ ಆಡಿಟ್” ವಿಷಯದ ಬಗ್ಗೆ ಒಂದು ದಿನದ ಮಾಹಿತಿ ಕಾರ್ಯಾಗಾರವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ನಿವೃತ್ತ ಮೆಸ್ಕಾಂ ಅಧಿಕಾರಿ ಉಪೇಂದ್ರ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡುತ್ತಾ,  ವಿದ್ಯುತ್ ಪ್ರಸರಣ ಮತ್ತು ವಿತರಣೆಯಲ್ಲಿ ಒಳಪಡುವ ತಾಂತ್ರಿಕ ಮತ್ತು ತಾಂತ್ರಿಕೇತರ ನಷ್ಟಗಳ ಬಗಗೆ ವಿವರಿಸಿದರು. ಇಂತಹ ವಿಚಾರ ಸಂಕಿರಣದಲ್ಲಿ ವಿದ್ಯಾರ್ಥಿಗಳು ಹೆಚ್ಚೆಚ್ಚು ಭಾಗವಹಿಸುವುದರೊಂದಿಗೆ ಜ್ಞಾನಶಕ್ತಿಯನ್ನು ವೃದ್ಧಿಗೊಳಿಸಬೇಕು ಎಂದು ಹೇಳಿದರು.

ವಿಭಾಗದ ಮುಖ್ಯಸ್ಥ ಪ್ರೊ.ಜಾನ್ ವಾಲ್ಡರ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಇಂಜಿನಿಯರಿಂಗ್ ವಿದ್ಯಾರ್ಥಿ ಗಳು ದೇಶಕ್ಕೆ ತಮ್ಮದೇ ಆದ ಕೊಡುಗೆ ನೀಡುವಂತಾಗಬೇಕು. ಜೊತೆಗೆ ಇಂತಹ ಕಾರ್ಯಗಾರಗಳಲ್ಲಿ ಹೆಚ್ಚೆಚ್ಚು ತೊಡಗಿಸಿ ಕೊಂಡು ಮುನ್ನಡೆಯಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪ್ರೊ. ಸ್ಲೀಬಾ ಮ್ಯಾಥ್ಯೂ ವಂದಿಸಿದರು. ಅಶ್ಮೀಲಾ ಕಾರ್ಯಕ್ರಮವನ್ನು ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News