30,000 ವೈದ್ಯಕೀಯ ಸೀಟುಗಳ ಹೆಚ್ಚಳ: ಸರಕಾರ

Update: 2019-11-29 17:52 GMT

ಹೊಸದಿಲ್ಲಿ, ನ.29: ದೇಶದಲ್ಲಿರುವ 539 ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಕಳೆದ 6 ವರ್ಷಗಳಲ್ಲಿ 29,185 ವೈದ್ಯಕೀಯ ಸೀಟುಗಳನ್ನು ಹೆಚ್ಚಿಸಲಾಗಿದ್ದು ಮುಂದಿನ ದಿನಗಳಲ್ಲಿ ಇನ್ನೂ 10,000 ಹೆಚ್ಚುವರಿ ಎಂಬಿಬಿಎಸ್ ಸೀಟುಗಳನ್ನು ಒದಗಿಸಲಾಗುವುದು ಎಂದು ಕೇಂದ್ರ ಸರಕಾರ ತಿಳಿಸಿದೆ.

ಕೇಂದ್ರ ಪ್ರಾಯೋಜಿತ ಯೋಜನೆ(ಸಿಎಸ್‌ಎಸ್)ನಡಿ 26 ಹೊಸ ಮೆಡಿಕಲ್ ಕಾಲೇಜುಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದ್ದು ಜಮ್ಮು ಮತ್ತು ಕಾಶ್ಮೀರ, ಲಡಾಖ್, ರಾಜಸ್ತಾನ, ಕರ್ನಾಟಕ, ತಮಿಳುನಾಡು ಮತ್ತು ಉತ್ತರಪ್ರದೇಶ ರಾಜ್ಯಗಳಲ್ಲಿ ಈಗಿರುವ ಜಿಲ್ಲಾ/ ಉಲ್ಲೇಖಿತ ಆಸ್ಪತ್ರೆಗಳಲ್ಲಿ ಇದನ್ನು ಸಂಯೋಜಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಾಯಕ ಸಚಿವ ಅಶ್ವಿನಿ ಕುಮಾರ್ ಚೌಬೆ ಹೇಳಿದ್ದಾರೆ. ವೈದ್ಯಕೀಯ ಶಿಕ್ಷಣದ ಕುರಿತು ಜಿಎಸ್ ಬಸವರಾಜ್ ಅವರ ಪ್ರಶ್ನೆಗೆ ಸಚಿವರು ಉತ್ತರಿಸುತ್ತಿದ್ದರು.

ವಿದೇಶದಲ್ಲಿ ವೈದ್ಯಕೀಯ ಶಿಕ್ಷಣ ಪಡೆಯಲು ಆಸಕ್ತ ವಿದ್ಯಾರ್ಥಿಗಳಿಗೆ ನಡೆಸಲಾಗುವ ‘ಫಾರಿನ್ ಮೆಡಿಕಲ್ ಗ್ರಾಜುವೇಟ್’ ಪರೀಕ್ಷೆಯಲ್ಲಿ ಕಳೆದ 4 ವರ್ಷದಲ್ಲಿ 61,708 ವಿದ್ಯಾರ್ಥಿಗಳು ಪಾಲ್ಗೊಂಡಿದ್ದು 8,764 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಎಂದವರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News