ಶೇ.30ರಷ್ಟು ಮತದಾರರ ತೀರ್ಮಾನದ ಮೇಲೆ ಅಭ್ಯರ್ಥಿಗಳ ಭವಿಷ್ಯ: ಸತೀಶ್ ಜಾರಕಿಹೊಳಿ

Update: 2019-11-30 12:16 GMT

ಬೆಳಗಾವಿ, ನ. 30: ಜಿಲ್ಲೆಯ ಗೋಕಾಕ್ ಕ್ಷೇತ್ರದಲ್ಲಿ ಶೇ.30ರಷ್ಟು ಪ್ರಜ್ಞಾವಂತ ಮತದಾರರಿದ್ದು, ಅವರು ಯಾವ ಪಕ್ಷಕ್ಕೆ ಮತ ಹಾಕಲಿದ್ದಾರೆಂಬುದರ ಮೇಲೆ ಅಭ್ಯರ್ಥಿಗಳ ಗೆಲುವು ನಿಂತಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಶನಿವಾರ ಗೋಕಾಕ್‌ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 5ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಸೇರಿ ಮೂವರು ಪ್ರಬಲ ಅಭ್ಯರ್ಥಿಗಳಿದ್ದು, ಯಾರಿಗೆ ಮತ ಹಾಕಬೇಕೆಂದು ಜನತೆ ಗೊಂದಲದಲ್ಲಿ ಇದ್ದಾರೆ ಎಂದು ಹೇಳಿದರು.

ಕ್ಷೇತ್ರದಲ್ಲಿ ಶೇ.30ರಷ್ಟು ಮತದಾರರು ಯಾವ ಪಕ್ಷದ ಪರ ಇದ್ದಾರೆಂದು ಹೇಳುವುದು ಕಷ್ಟ ಮತ್ತು ಅವರನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದ ಅವರು, ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರೆಲ್ಲ ನವ್ಮೊಂದಿಗೆ ಇದ್ದಾರೆ ಎಂದರು.

ರಮೇಶ್ ಜಾರಕಿಹೊಳಿ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯವನ್ನು ಮಾಡಿಲ್ಲ. ಕುಡಿಯುವ ನೀರು, ರಸ್ತೆ, ಬಸ್ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳಿಲ್ಲ. ಹೀಗಾಗಿ ಅವುಗಳನ್ನು ಮತದಾರರಿಗೆ ನಾವು ಮನವರಿಕೆ ಮಾಡಿಕೊಡುತ್ತಿದ್ದೇವೆ. ಕ್ಷೇತ್ರದ ಮತದಾರರು ಬದಲಾವಣೆ ಬಯಸಿದ್ದಾರೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News