ಡಿ.ಕೆ.ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

Update: 2019-11-30 14:27 GMT

ಬೆಂಗಳೂರು, ನ.30: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ನಿಯೋಗ ದೂರು ಸಲ್ಲಿಕೆ ಮಾಡಿದೆ.

ಶನಿವಾರ ನಗರದ ಶೇಷಾದ್ರಿ ರಸ್ತೆಯ ಚುನಾವಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ ಶಾಸಕ ಸತೀಶ್ ರೆಡ್ಡಿ ನೇತೃತ್ವದ ನಿಯೋಗ, ಮಾಜಿ ಸಚಿವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ರೆಡ್ಡಿ, ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಎ.ಕೃಷ್ಣಪ್ಪ ಸಾವಿಗೆ ಭೈರತಿ ಬಸವರಾಜು ಕಾರಣ ಎಂದು ಹೇಳಿಕೆ ನೀಡಿದ್ದಾರೆ. ಈ ರೀತಿಯ ಹೇಳಿಕೆ ನೀಡದಂತೆ ನಿರ್ಬಂಧ ವಿಧಿಸುವಂತೆ ಆಗ್ರಹಿಸಿದರು.

ಅದೇ ರೀತಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಪಕ್ಷದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಸಂದೇಶಗಳನ್ನು ಪ್ರಕಟಿಸುತ್ತಿರುವ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News