ರಾಜ್ಯಪಾಲ ವಜುಭಾಯಿ ವಾಲಾ ಆಸ್ಪತ್ರೆಯಿಂದ ಡಿಸ್ಚಾರ್ಜ್

Update: 2019-11-30 14:33 GMT

ಬೆಂಗಳೂರು, ನ. 30: ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆ ದಾಖಲಾಗಿದ್ದ ರಾಜ್ಯಪಾಲ ವಜುಭಾಯಿ ವಾಲಾ ಅವರು ಶನಿವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಆಸ್ಪತ್ರೆ, ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಯಶಸ್ವಿಯಾಗಿ ಬೈಪಾಸ್ ಸರ್ಜರಿ ನಡೆಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ನ.24ರಂದು ಇಲ್ಲಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯಪಾಲರು ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಐದು ದಿನಗಳ ಕಾಲ ಅವರ ಆರೋಗ್ಯ ಸ್ಥಿತಿಯನ್ನು ಗಮನಿಸಿದ ವೈದ್ಯರು ಶನಿವಾರ ಡಿಸ್ಚಾರ್ಜ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News