×
Ad

ಬಂಟ್ವಾಳ: ಇರಾ ಗ್ರಾಪಂ ಅಧ್ಯಕ್ಷರ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Update: 2019-11-30 21:27 IST

ಬಂಟ್ವಾಳ, ನ. 30: ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಮಂಚಿ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.

ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ರಝಾಕ್ ಕುಕ್ಕಾಜೆ ಹಲ್ಲೆಗೊಳಗಾದವರು ಎಂದು ತಿಳಿದುಬಂದಿದೆ.

ರಝಾಕ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಚಿ ಗ್ರಾಮದ ಮಂಚಿ ಕಟ್ಟೆಯಲ್ಲಿರುವ ಕ್ಲಿನಿಕ್ ವೊಂದಕ್ಕೆ ಇಂದು ರಾತ್ರಿ ಬಂದಿದ್ದರು ಎನ್ನಲಾಗಿದೆ‌. ಈ ವೇಳೆ ಬೈಕ್ ನಲ್ಲಿ ಬಂದ ಮೂವರಿದ್ದ ತಂಡ  ರಝಾಕ್ ರಿಗೆ  ಮಾರಕಾಸ್ತ್ರ ಗಳಿಂದ ಹಲ್ಲೆ ನಡೆಸಿ ಪರಾರಿಯಾಗಿರುವುದಾಗಿ ತಿಳಿದುಬಂದಿದೆ.

ಘಟನೆಯಿಂದ ರಝಾಕ್ ಅವರ ಕೈಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಸೀದಿ ಹಾಗೂ ವೈಯಕ್ತಿಕ ವಿಚಾರದಲ್ಲಿ ಈ ಹಲ್ಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News