×
Ad

ಬೌನ್ಸ್ ಉದ್ದಿಮೆ ಮೇಲೆ ದಾಳಿ: 15 ಸ್ಕೂಟರ್ ವಶ

Update: 2019-11-30 22:23 IST

ಉಡುಪಿ, ನ.30: ಉಡುಪಿ ಮತ್ತು ಮಣಿಪಾಲದಲ್ಲಿ ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಬೌನ್ಸ್ ದ್ವಿಚಕ್ರ ವಾಹನ ಬಾಡಿಗೆ ವ್ಯವಹಾರ ಉದ್ದಿಮೆ ಮೇಲೆ ಪೌರಾಯುಕ್ತ ಆನಂದ ಕಲ್ಲೋಳಿಕರ್ ನೇತೃತ್ವದ ತಂಡ ಇಂದು ದಾಳಿ ನಡೆಸಿದೆ.

ಬೌನ್ಸ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಕೆಲ ಸಮಯಗಳ ಹಿಂದೆ ರಿಕ್ಷಾ ಚಾಲಕರು ಮತ್ತು ಮಾಲಕರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಈ ವೇಳೆ ಪರವಾನಿಗೆ ಇಲ್ಲದ ಬೌನ್ಸ್ ದ್ವಿಚಕ್ರ ವಾಹನಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ, ಪೌರಾಯುಕ್ತರಿಗೆ ಸೂಚನೆ ನೀಡಿದ್ದರು.

ಅದರಂತೆ ಖಚಿತ ಮಾಹಿತಿಯಂತೆ ದಾಳಿ ನಡೆಸಿದ ತಂಡವು ಉಡುಪಿ ಮತ್ತು ಮಣಿಪಾಲದಲ್ಲಿ ಒಟ್ಟು 15 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡು ವ್ಯವಹಾರವನ್ನು ಸ್ಥಗಿತಗೊಳಿಸಿದೆ. ಈ ತಂಡದಲ್ಲಿ ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಮಕೃಷ್ಣ ರೈ, ಮಣಿಪಾಲ ಠಾಣೆಯ ಪೊಲೀಸ್ ಉಪನಿರೀಕ್ಷಕ ಶ್ರೀಧರ್ ನಂಬಿಯಾರ್ ಮತ್ತು ಉಡುಪಿ ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಕರುಣಾಕರ, ಸ್ಯಾನಿಟರಿ ಸೂಪರ್ವೈಸರ್ ದಾಮೋದರ ಮೊದಲಾದ ವರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News