ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲಿಸಿದ ಉಡುಪಿ ಜಿಲ್ಲಾಧಿಕಾರಿ
Update: 2019-11-30 22:28 IST
ಉಡುಪಿ, ನ.30: ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್, ಶನಿವಾರ ಜಿಲ್ಲೆಯ ವಿವಿಧ ಸ್ಥಳಗಳ ತನಿಖೆಗೆ ತೆರಳುತ್ತಿರುವ ಸಂದರ್ಭದಲ್ಲಿ ಬೆಳ್ಮಣ್- ಕಟಪಾಡಿ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದನ್ನು ಕಂಡು ತಮ್ಮ ವಾಹನದಿಂದ ಇಳಿದು ಸ್ವತ: ರಸ್ತೆ ದುರಸ್ತಿ ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ರಸ್ತೆ ದುರಸ್ತಿ ಕಾಮಗಾರಿಯ ಗುಣಮಟ್ಟ ಕಡಿಮೆ ಇರುವುದರ ಕುರಿತು ಸ್ಥಳದಲ್ಲಿದ್ದ ಸಂಬಂಧಪಟ್ಟ ಗುತ್ತಿಗೆದಾರರಿಗೆ, ಸಮರ್ಪಕ ರೀತಿಯಲ್ಲಿ ಉತ್ತಮ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ದೂರವಾಣಿ ಮೂಲಕ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿ, ಕಾಮಗಾರಿಯ ಗುಣಮಟ್ಟ ವನ್ನು ಪರೀಕ್ಷಿಸಿ, ಉತ್ತಮ ಗುಣಮಟ್ಟದಿಂದ ಕೂಡಿದ ದುರಸ್ತಿ ಕಾಮಗಾರಿ ಯನ್ನು ಆದಷ್ಟು ಶೀಘ್ರದಲ್ಲಿ ಪೂರ್ಣೊಳಿಸುವಂತೆ ನಿರ್ದೇಶನ ನೀಡಿದರು.