×
Ad

ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರು ಇ-ಕೆವೈಸಿ ನೀಡಲು ಸೂಚನೆ

Update: 2019-11-30 22:50 IST

ಮಂಗಳೂರು, ನ.30: ರಾಜ್ಯ ಸರಕಾರದ ಸೂಚನೆಯಂತೆ ಎಲ್ಲಾ ಪಡಿತರ ಚೀಟಿದಾರರ ಕುಟುಂಬದ ಸದಸ್ಯರ ಇ-ಕೆವೈಸಿಯನ್ನು ಸಂಗ್ರಹಿಸಲು ಆದೇಶವಾಗಿದ್ದು ಡಿಸೆಂಬರ್ ಮತ್ತು ಜನವರಿಯಲ್ಲಿ 1 ರಿಂದ 10ನೆ ತಾರೀಕಿನವರೆಗೆ ಎಲ್ಲಾ ಪಡಿತರ ಚೀಟಿದಾರರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿಯನ್ನು ನೀಡಬೇಕು. ಇ-ಕೆವೈಸಿ ನೀಡಲು ಯಾವುದೇ ಶುಲ್ಕ ಇರುವುದಿಲ್ಲ. ಇದನ್ನು ಉಚಿತವಾಗಿ ಮಾಡಲು ಕ್ರಮವಹಿಸಲಾಗಿದೆ.

ಈಗಾಗಲೇ ಇ-ಕೆವೈಸಿ ನೀಡಿದ್ದಲ್ಲಿ ಮತ್ತೊಮ್ಮೆ ನೀಡುವ ಅವಶ್ಯಕತೆ ಇರುವುದಿಲ್ಲ. ಇ-ಕೆವೈಸಿ ಪಡೆಯಲು ಯಾರಾದರೂ ಹಣ ಕೇಳಿದಲ್ಲಿ ಅಥವಾ ಏನಾದರೂ ದೂರುಗಳಿದ್ದರೆ ಅಥವಾ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಆಹಾರ ಇಲಾಖೆ ಮಂಗಳೂರು ಅಥವಾ ಆಯಾ ತಾಲೂಕಿನ ತಹಶೀಲ್ದಾರರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ದ.ಕ. ಜಿಲ್ಲಾಧಿಕಾರಿ ಕಚೇರಿಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News