ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ: ಮರಣದಂಡನೆ ವಿಧಿಸಲು ಒತ್ತಾಯಿಸಿ ಮೈಸೂರಿನಲ್ಲಿ ಧರಣಿ

Update: 2019-11-30 18:08 GMT

ಮೈಸೂರು,ನ.30: ಹೈದರಾಬಾದ್ ನಲ್ಲಿ ಪಶುವೈದ್ಯೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆಗೈದ ಅಪರಾಧಿಗಳಿಗೆ ಮರಣದಂಡನೆ ವಿಧಿಸುವಂತೆ ಒತ್ತಾಯಿಸಿ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ರಾಮಸ್ವಾಮಿ ಸರ್ಕಲ್ ನಲ್ಲಿ ಶನಿವಾರ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ, ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಜೀವಂತವಾಗಿ ದಹನ ಮಾಡಿರುವುದನ್ನು ಖಂಡಿಸುತ್ತೇವೆ. ಘಟನೆಗೆ ಕಾರಣರಾದವರಿಗೆ ಕೂಡಲೇ ಮರಣದಂಡನೆ ವಿಧಿಸಬೇಕು. ಘಟನೆ ನಡೆದು ಎರಡು ದಿನಗಳವರೆಗೆ ತನಿಖೆ ಚುರುಕುಗೊಳಿಸದ ಪೊಲೀಸ್ ನಡೆ ಸುರಕ್ಷತೆ ವೈಫಲ್ಯಕ್ಕೆ ಕಾರಣವಾಗಿದೆ ಎಂದು ಆರೋಪಿಸಿದರು.

ತೆಲಂಗಾಣ ಗೃಹ ಮಂತ್ರಿಗಳು ನೀಡಿದ ಹೇಳಿಕೆಯು ಅವರ ಕೀಳು ಮಾನಸಿಕತೆಯನ್ನು ಬಿಂಬಿಸುತ್ತದೆ. ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ವಿಧಿಸುವ ಬದಲು ಹತ್ಯೆಗೀಡಾದ ವೈದ್ಯೆಯ ಮೇಲೆಯೇ ಗೂಬೆ ಕೂರಿಸುವುದು ಅಸಹನೀಯ. ಫಾಸ್ಟ್ ಟ್ರ್ಯಾಕ್ ಕೋರ್ಟ್ ಮೂಲಕ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸಿ, ಸಮಾಜದಲ್ಲಿ ಇಂತಹ ಘಟನೆ ಮರುಕಳಿಸದಂತೆ ನೋಡಿಕೊಳ್ಳಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರಾಕೇಶ್, ಹೇಮಾವತಿ, ರಾಜೇಶ್ವರಿ, ಸೋಮಶೇಖರ್, ದಿಲೀಪ್ ಸೇರಿದಂತೆ ಹಲವಾರು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News