ವಿದ್ಯಾರ್ಥಿ ವೇತನ ರದ್ದು: ಎಸ್‌ಐಒ ಖಂಡನೆ

Update: 2019-11-30 18:21 GMT

ಬೆಂಗಳೂರು, ನ.30: ಸರಕಾರ ಹಣಕಾಸಿನ ಕೊರತೆಯ ನೆಪವೊಡ್ಡಿ ಹಿಂದುಳಿದ ವರ್ಗಗಳ ಇಲಾಖೆಯ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ರದ್ದು ಮಾಡಿರುವುದನ್ನು ಎಸ್‌ಐಒ ಖಂಡಿಸಿದೆ.

ರಾಜ್ಯ ಸರಕಾರ 2019-20 ರ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ರದ್ದು ಮಾಡಿ ಸುತ್ತೋಲೆ ನೀಡಿದ್ದು, ಇದರಿಂದಾಗಿ ಹದಿನೈದು ಲಕ್ಷ ವಿದ್ಯಾರ್ಥಿಗಳು ಸಮಸ್ಯೆಗೀಡಾಗಿದ್ದಾರೆ. ಸುತ್ತೋಲೆಯ ಅರಿವಿಲ್ಲದೆ ಈಗಾಗಲೇ 1-10 ತರಗತಿಯ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ್ದು ಸರಕಾರದ ಬೇಜವಾಬ್ದಾರಿಯಿಂದಾಗಿ ವಿದ್ಯಾರ್ಥಿಗಳು ಸಂಕಷ್ಟಕೀಡಾಗಿದ್ದಾರೆ. ಕೂಡಲೇ ವಿದ್ಯಾರ್ಥಿಗಳಿಗೆ ಕಾನೂನು ಬದ್ಧವಾಗಿ ಸಿಗಬೇಕಾದ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಬೇಕು. ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದೆಂದು ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ವಿದ್ಯಾರ್ಥಿಗಳಿಗೆ ಲಿಖಿತ ರೂಪದಲ್ಲಿ ಭರವಸೆ ನೀಡಬೇಕೆಂದು ಎಚ್‌ಐಒ ನ ಕಾರ್ಯದರ್ಶಿ ಮುಹಮ್ಮದ್ ಮೊಹ್ಸಿನ್ ಪತ್ರಿಕಾ ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News