ಉಪಚುನಾವಣೆ ಬಳಿಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬಗ್ಗೆ ದೇವೇಗೌಡ ಹೇಳಿದ್ದು ಹೀಗೆ...

Update: 2019-12-01 13:03 GMT

ಬೆಂಗಳೂರು, ಡಿ.1: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ರಚನೆ ಸಂಬಂಧ ಹಳೇ ತಪ್ಪುಗಳು ನಡೆಯುವುದಿಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ನುಡಿದರು.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರಕಾರದ ಮುಖ್ಯಮಂತ್ರಿ ಆದ ದಿನದಿಂದಲೂ ಅಧಿಕಾರ ಕಳೆದುಕೊಳ್ಳುವವರೆಗೂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಹಿಂಸೆ ನೀಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಆಡಳಿತಾರೂಢ ಬಿಜೆಪಿ ಸರಕಾರ ಏಕೆ ಬೀಳುತ್ತದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕೈಯಲ್ಲಿ 105 ಶಾಸಕರಿಲ್ಲವೆ ಎಂದು ಪ್ರಶ್ನಿಸಿದ ಅವರು, ಈಗಲೂ ಜೆಡಿಎಸ್‌ನ ಶಾಸಕರು ಬಿಜೆಪಿಗೆ ಹೋಗಲಿದ್ದಾರೆಂದು ಮಾಧ್ಯಮಗಳು ಬಿಂಬಿಸುತ್ತಿವೆ. ಇದು ಸರಿಯಲ್ಲ. ಇದನ್ನು ನಿಲ್ಲಿಸಬೇಕು ಎಂದರು. ಮೈತ್ರಿ ಸರಕಾರದಲ್ಲಿ ಅನುಭವಿಸಿದ್ದೇ ಸಾಕು. ಮತ್ತೆ ಆ ತಪ್ಪನ್ನು ನಾವು ಮಾಡುವುದಿಲ್ಲ ಎಂದು ದೇವೇಗೌಡ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News