×
Ad

ಅಂತರ್ ಜಿಲ್ಲಾಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ ಉದ್ಘಾಟನೆ

Update: 2019-12-01 19:53 IST

ಉಡುಪಿ, ಡಿ.1: ಪರ್ಯಾಯ ಪಲಿಮಾರು ಮಠದ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘ ಉಡುಪಿ ಜಿಲ್ಲೆ ಇದರ ವತಿಯಿಂದ ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳಿಗೆ ಅಂತರ್ ಜಿಲ್ಲಾ ಮಟ್ಟದ ಪರಿಸರ ಮತ್ತು ವನ್ಯಜೀವ ವಿಷಯದ ಕುರಿತು ಚಿತ್ರ ಬಿಡಿಸುವ ಸ್ಪರ್ಧೆಯನ್ನು ರವಿವಾರ ಉಡುಪಿ ಶ್ರೀಕೃಷ್ಣ ಮಠದ ಮಧ್ವಾಂಗಣದಲ್ಲಿ ಏರ್ಪಡಿಸಲಾಗಿತ್ತು.

ಸ್ಪರ್ಧೆಯನ್ನು ಕರ್ನಾಟಕ ಸರಕಾರಿ ನೌಕರರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಜೀವನ್‌ದಾಸ್ ಶೆಟ್ಟಿ, ಪ್ರಕಾಶ್ಚಂದ್ರ, ನಾಗೇಶ್ ಬಿಲ್ಲವ, ಲಯನ್ಸ್ ಪದ್ಮ ಕಿಣಿ, ಲಯನ್ಸ್ ಕಾರ್ಯದರ್ಶಿ ವೀಣಾ ಜೀವನ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಸ್ಪರ್ಧೆಯಲ್ಲಿ ಸುಮಾರು 50ಕ್ಕೂ ಅಧಿಕ ವಿವಿಧ ಶಾಲೆಗಳಿಂದ ಸುಮಾರು 200 ವಿದ್ಯಾರ್ಥಿಗಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News