ಮನೆಗೆ ನುಗ್ಗಿ ಚಿನ್ನಾಭರಣ ಕಳವು

Update: 2019-12-01 15:52 GMT

ಹೆಬ್ರಿ, ಡಿ.1: ಶಿವಪುರ ಗ್ರಾಮದ ಮುಳ್ಳುಗುಡ್ಡೆ ಎಂಬಲ್ಲಿ ನ.30ರಂದು ಬೆಳಗ್ಗೆ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.

ಹಿರಿಯಣ್ಣ ಶೆಟ್ಟಿ ಎಂಬವರು ಮನೆಗೆ ಬೀಗ ಹಾಕಿ ಅಡಿಕೆ ತೋಟಕ್ಕೆ ಹೋಗಿದ್ದ ವೇಳೆ ಕಳ್ಳರು ಮನೆಯ ಎದುರಿನ ಬಾಗಿಲಿನ ಬೀಗ ಮುರಿದು ಒಳಗೆ ನುಗ್ಗಿ ಕಪಾಟಿನಲ್ಲಿದ್ದ 2 ಗ್ರಾಂ ತೂಕದ ಮಗುವಿನ ಕಿವಿ ಓಲೆ ಹಾಗೂ ವಜ್ರದ ಮೂಗುತಿಯನ್ನು ಕಳವು ಮಾಡಿ ಕೊಂಡು ಹೋಗಿದ್ದಾರೆ. ಇವುಗಳ ಒಟ್ಟು ಮೌಲ್ಯ 10,000ರೂ. ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News