ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ: ಪಾದಚಾರಿ ಮೃತ್ಯು

Update: 2019-12-01 15:53 GMT

ಕೋಟ, ಡಿ.1: ಕೆಎಸ್‌ಆರ್‌ಟಿಸಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಟಿಪ್ಪರ್ ಚಾಲಕ ಮೃತಪಟ್ಟ ಘಟನೆ ನ.29ರಂದು ಸಂಜೆ 4.45ರ ಸುಮಾರಿಗೆ ಅಚ್ಲಾಡಿ ಗ್ರಾಮದ ಗರಿಕೆಮಠ ಎಂಬಲ್ಲಿ ನಡೆದಿದೆ.

ಮೃತರನ್ನು ಬಸವರಾಜ ಎಂದು ಗುರುತಿಸಲಾಗಿದೆ. ಇವರು ತನ್ನ ಟಿಪ್ಪರ್‌ನ್ನು ರಸ್ತೆ ಬದಿ ನಿಲ್ಲಿಸಿ ಮೂತ್ರ ಮಾಡಲು ರಸ್ತೆ ದಾಡುತ್ತಿದ್ದಾಗ ಸಾಯಿಬ್ರಕಟ್ಟೆ ಕಡೆಯಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ ಬಸವರಾಜ್‌ಗೆ ಢಿಕ್ಕಿ ಹೊಡೆ ಯಿತ್ತೆ ನ್ನಲಾಗಿದೆ. ಇದರಿಂದ ರಸ್ತೆ ಬಿದ್ದು ಬಸ್ಸಿನ ಚಕ್ರದಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News