ಮತ್ತೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ: ಮಾಜಿ ಸಿಎಂ ವೀರಪ್ಪ ಮೊಯ್ಲಿ

Update: 2019-12-01 16:15 GMT

ಮೈಸೂರು,ಡಿ.1: ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಬಿಜೆಪಿ 2 ಸ್ಥಾನ ಗೆಲ್ಲೋದೆ ಕಷ್ಟ, ಬಿಜೆಪಿ ಸರ್ಕಾರ ಬಿದ್ದುಹೋದರೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ತಿಳಿಸಿದರು.

ನಗರದ ಖಾಸಗಿ ಹೋಟೆಲ್‍ನಲ್ಲಿ ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಬಿದ್ದುಹೋದರೆ ಕಾಂಗ್ರೆಸ್-ಜೆಡಿಎಸ್ ಸರ್ಕಾರ ರಚನೆಯಾಗಲಿದೆ. ಮುಖ್ಯಮಂತ್ರಿ ಯಾರು ಹಾಗುತ್ತಾರೆ ಅನ್ನೋದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.

ನಾವು ಜೆಡಿಎಸ್ ಪಕ್ಷದೊಂದಿಗೆ ಸೇರಿ ಸರ್ಕಾರ ರಚನೆ ಮಾಡುತ್ತೇವೆ. ನಮ್ಮ ಗುರಿ ಬಿಜೆಪಿ ಮುಕ್ತ ರಾಜ್ಯ ಮಾಡುವುದು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರದಿಂದ ಕೆಳಗೆ ಇಳಿಯುವುದು ಖಚಿತ, ಈ ಸಮಯದಲ್ಲಿ ನಮ್ಮವರು ಯಾವುದೇ ಹೇಳಿಕೆಗಳನ್ನು ನೀಡಬಾರದು ಎಂದು ಹೇಳಿದರು.

ಈಗಾಗಲೇ ನಾವು ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಿದ್ದೇವೆ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು ಎಂದರೆ ಅನಿವಾರ್ಯವಾಗಿ ಜೆಡಿಎಸ್ ಜೊತೆ ಕೈ ಜೋಡಿಸಬೇಕು. ಅನರ್ಹ ಶಾಸಕರಿಗೆ ಈ ಬಾರಿ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ವಾಸು, ಮೇಯರ್ ಪುಷ್ಪಲತಾ ಜಗನ್ನಾಥ್ ಸೇರಿದಂತೆ ಹಲವು ಕಾಂಗ್ರೆಸ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News