ಫಡ್ನವೀಸ್ ಮಹಾರಾಷ್ಟ್ರ ವಿಧಾನಸಭೆ ವಿಪಕ್ಷ ನಾಯಕ

Update: 2019-12-01 17:26 GMT

 ಮುಂಬೈ, ಡಿ.1: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್‌ರನ್ನು ವಿಧಾನಸಭೆ ಪ್ರತಿಪಕ್ಷ ನಾಯಕರನ್ನಾಗಿ ನೇಮಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

  ವಿಧಾನಸಭೆಯ ನೂತನ ಸ್ಪೀಕರ್ ಆಗಿ ಆಯ್ಕೆಯಾದ ಕಾಂಗ್ರೆಸ್ ಮುಖಂಡ ನಾನಾ ಪಟೋಲೆ ಪ್ರತಿಪಕ್ಷ ನಾಯಕನನ್ನಾಗಿ ದೇವೇಂದ್ರ ಫಡ್ನವೀಸ್‌ರನ್ನು ಹಾಗೂ ಬಿಜೆಪಿಯನ್ನು ಪ್ರತಿಪಕ್ಷವೆಂದು ನಿಯೋಜಿಸಲಾಗಿದೆ ಎಂದು ಪ್ರಕಟಿಸಿದರು. ಬಳಿಕ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ನ ಹಿರಿಯ ಮುಖಂಡರು ಫಡ್ನವೀಸ್‌ರನ್ನು ಅಭಿನಂದಿಸಿದರು.

ಮಹಾರಾಷ್ಟ್ರದಲ್ಲಿ ಸ್ಪೀಕರ್‌ರನ್ನು ಅವಿರೋಧವಾಗಿ ಆಯ್ಕೆ ಮಾಡುವ ಸಂಪ್ರದಾಯವಿದೆ. ಹಂಗಾಮಿ ಸ್ಪೀಕರ್ ದಿಲೀಪ್ ಪಾಟೀಲ್ ಅವಿರೋಧ ಆಯ್ಕೆಗೆ ನೆರವಾಗುವಂತೆ ಮಾಡಿಕೊಂಡ ಮನವಿಗೆ ಬಿಜೆಪಿ ಸ್ಪಂದಿಸಿದೆ. ನೂತನ ಸ್ಪೀಕರ್ ಪಟೋಲೆಗೆ ಅಭಿನಂದನೆಗಳು ಎಂದು ಫಡ್ನವೀಸ್ ಟ್ವೀಟ್ ಮಾಡಿದ್ದಾರೆ.

ಅಲ್ಲದೆ ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದ ತೊಂದರೆಗೊಳಗಾದ ರೈತರಿಗೆ ಪ್ರತೀ ಹೆಕ್ಟೇರ್‌ಗೆ 25000 ರೂ.ನಂತೆ ಪರಿಹಾರ ಒದಗಿಸಬೇಕು ಎಂದು ಅವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆಯನ್ನು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News