ಸ್ವಚ್ಛ ನೀರಿನ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ
ಬೆಂಗಳೂರು, ಡಿ. 1: ಜನರಲ್ಲಿ ಸ್ವಚ್ಛ ಕುಡಿಯುವ ನೀರಿನ ಬಗ್ಗೆ ಜಾಗೃತಿ ಮೂಡಿಸುವ ದೃಷ್ಠಿಯಿಂದ ರಾಜ್ಯದ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯ 320 ಸರಕಾರಿ ಶಾಲೆಗಳ 21,080 ವಿದ್ಯಾರ್ಥಿಗಳಿಗೆ ಸ್ಚಚ್ಛ ಮತ್ತು ಸ್ವಸ್ಥ ಕುಡಿಯುವ ನೀರನ್ನು ಒದಗಿಸುವ ಉದ್ದೇಶದಿಂದ ಜಾಥಾ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ತಿಳಿಸಿದ್ದಾರೆ.
ರವಿವಾರ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಸ್ವಚ್ಛ ಮತ್ತು ಸ್ವಸ್ಥ ಕುಡಿಯುವ ನೀರನ್ನು ಒದಗಿಸುವ ಉದ್ದೇಶದಿಂದ ಸೆಂಟ್ ಜೋಸೆಫ್ ಹೈಸ್ಕೂಲ್ ಮೈದಾನದಿಂದ ಏರ್ಪಡಿಸಿದ್ದ ‘ನೀರಿಗಾಗಿ ನಡೆ’ ಜಾಥಾ ಉದ್ಘಾಟಿಸಿ ಮಾತನಾಡಿದ ಅವರು, ಈಗಿನ ಪರಿಸ್ಥಿತಿಯಲ್ಲಿ ಸ್ವಚ್ಛ ಕುಡಿಯುವ ನೀರು ದೊರೆಯುವುದು ಬಹಳ ಕಠಿಣವಾಗಿದೆ. ಆದುದರಿಂದ ಕೆರೆಗಳ ಸಂರಕ್ಷಣೆ ಹಾಗೂ ನೀರಿನ ಸಂರಕ್ಷಿಸುವ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಬಹಳ ಪ್ರಮುಖ. ಮಳೆಯ ನೀರನ್ನು ಸಂರಕ್ಷಿಸುವುದರಿಂದ ಅಂತರ್ಜಲದ ಮಟ್ಟ ಹೆಚ್ಚಾಗುತ್ತದೆ ಪರಿಸರದಲ್ಲಿ ನೀರಿನ ಸಮತೋಲನತೆ ಆಗುತ್ತದೆ ಎಂದು ಅವರು ತಿಳಿಸಿದರು.
ಉದಕ್ ಸಂಸ್ಥೆ ಮಹತ್ವದ ಯೋಜನೆ ರೂಪಿಸಿ ಕುಡಿಯುವ ನೀರಿನ ಬಗ್ಗೆ ಜಾಗೃತಿ ಮೂಡಿಸಲು ಈಗಾಗಲೇ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ 21,080 ವಿದ್ಯಾರ್ಥಿಗಳನ್ನು ಹೊಂದಿರುವ 320 ಸರಕಾರಿ ಶಾಲೆಗಳಲ್ಲಿ ಸುರಕ್ಷಿತ ಕುಡಿಯುವ ನೀರಿನ ಒದಗಿಸುವ ಉದ್ದೇಶವನ್ನು ಹೊಂದಿದೆ ಎಂದು ತಿಳಿಸಲಾಗಿದೆ.