​ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆಗೆ ಅರ್ಜಿ ಆಹ್ವಾನ

Update: 2019-12-02 15:48 GMT

ಉಡುಪಿ, ಡಿ.2: 2019-20 ನೇ ಸಾಲಿನ ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆ(ಸಿ.ಎಂ.ಇ.ಜಿ.ಪಿ)ಯಡಿ ಸ್ವ-ಉದ್ಯೋಗ ಸ್ಥಾಪಿಸಲು ಆಸಕ್ತಿ ಇರುವ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ/ಯುವತಿಯರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಯೋಜನೆಯಲ್ಲಿ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ- ಯುವತಿಯರಿಗೆ ಗರಿಷ್ಠ ಯೋಜನಾ ವೆಚ್ಚ 10ಲಕ್ಷ ರೂ. ಬ್ಯಾಂಕ್ ಸಾಲ ದೊಂದಿಗೆ ಹೊಸ ಕೈಗಾರಿಕೆ ಉತ್ಪಾದನೆ ಚಟುವಟಿಕೆ ಹಾಗೂ ಆಯ್ದ ಕೆಲವು ಸೇವಾ ಘಟಕ ಸ್ಥಾಪಿಸುವವರಿಗೆ ಅವಕಾಶವಿದ್ದು, ಪ್ರಸ್ತುತ ಹೊಂದಿರುವ ಚಟುವಟಿಕೆ/ಘಟಕಗಳ ವಿಸ್ತರಣೆಗೆ ಅವಕಾಶ ಇರುವುದಿಲ್ಲ. ಯೋಜನಾ ವೆಚ್ಚದ ಶೇ.25ರಿಂದ 35ರವರೆಗೆ ಸಹಾಯಧನ ನೀಡಲಾಗುವುದು.

ಅಭ್ಯರ್ಥಿ ಕನಿಷ್ಠ 8ನೇ ತರಗತಿ ಉತ್ತೀರ್ಣರಾಗಿರಬೇಕು. ಅರ್ಜಿ ದಾರರಿಗೆ ಕನಿಷ್ಠ 18 ವರ್ಷ ತುಂಬಿರಬೇಕು. ವಯೋಮಿತಿಯು ಗರಿಷ್ಠ 35 ವರ್ಷ ಸಾಮಾನ್ಯ ವರ್ಗದವರಿಗೆ ಹಾಗೂ ಗರಿಷ್ಠ 45 ವರ್ಷ ವಿಶೇಷ ವರ್ಗ ದವರಿಗೆ(ಮಹಿಳೆ/ಪರಿಶಿಷ್ಠ ಜಾತಿ/ಪರಿಶಿಷ್ಠ ಪಂಗಡ/ಹಿಂದುಳಿದ ವರ್ಗ/ಅಲ್ಪಸಂಖ್ಯಾತರು/ ಮಾಜಿ ಯೋಧರು/ಅಂಗವಿಕಲರು).ನಿರುದ್ಯೋಗಿ ಯುವಕ /ಯುವತಿಯರು ವೆಬ್‌ಸೈಟ್ http://cmegp.kar.nic.in ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಡಿ.15 ಕೊನೆಯ ದಿನ. ಹೆಚ್ಚಿನ ವಿವರಗಳನ್ನು ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ, ಕೈಗಾರಿಕಾ ಪ್ರದೇಶ, ಮಣಿಪಾಲ (ದೂ.ಸಂ.:0820-2575650, 0820-2575655) ಹಾಗೂ ಜಿಲ್ಲಾ ಅಧಿಕಾರಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ರಜತಾದ್ರಿ, ಮಣಿಪಾಲ(ದೂ.ಸಂ.:0820-2574855) ಕಚೇರಿಯಲ್ಲಿ ಪಡೆಯಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News