ಡಿ.3ರಿಂದ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Update: 2019-12-02 15:56 GMT

ಮಂಗಳೂರು, ಡಿ.2: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಡಿ.3,4,5,6ರಂದು ಅರಬ್ಬೀ ಸಮುದ್ರವು ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅನಾಹುತವನ್ನು ತಡೆಯುವ ಸಲುವಾಗಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ತಕ್ಷಣ ದಡ ಸೇರುವಂತೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News