ಪ್ರತ್ಯೇಕ ರಸ್ತೆ ಅಪಘಾತ: ಇಬ್ಬರು ಮೃತ್ಯು

Update: 2019-12-02 16:19 GMT

ಬೆಂಗಳೂರು, ಡಿ.2: ನಗರ ವ್ಯಾಪ್ತಿಯಲ್ಲಿ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತ ಪ್ರಕರಣಗಳಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ಇಲ್ಲಿನ ಮೈಸೂರು ರಸ್ತೆಯ ನಾಯಂಡನಹಳ್ಳಿ ಬಳಿ ಅಪರಿಚತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಬಿಎಂಟಿಸಿ ಸಿಬ್ಬಂದಿ ಹೊಸಕೆರೆಹಳ್ಳಿಯ ಕುಮಾರ್ ಮಹದೇವ ಎಂಬುವರು ಮೃತಪಟ್ಟಿದ್ದಾರೆ.

ರವಿವಾರ ರಾತ್ರಿ 7:20ರ ಸುಮಾರಿಗೆ ನಾಯಂಡನಹಳ್ಳಿ ಮುಖ್ಯ ರಸ್ತೆಯನ್ನು ದಾಟುತ್ತಿದ್ದಾಗ ವೇಗವಾಗಿ ಬಂದ ವಾಹನ ಢಿಕ್ಕಿ ಹೊಡೆದಿದೆ. ಇದರ ಪರಿಣಾಮ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹದೇವ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ

ವೃದ್ಧ ಮೃತ್ಯು: ಮೈಸೂರು ರಸ್ತೆಯ ಗಾಳಿ ಆಂಜನೇಯ ದೇವಾಲಯದ ಬಳಿ ರಸ್ತೆ ದಾಟುತ್ತಿದ್ದ ವೃದ್ಧರೊಬ್ಬರು ಸೋಮವಾರ ಖಾಸಗಿ ಬಸ್ ಹರಿದು ಸಾವನ್ನಪ್ಪಿದ್ದಾರೆ.

ಟೆಲಿಕಾಂ ಲೇಔಟ್‌ನ ರಾಘವ ನಗರದ ರಂಗಸ್ವಾಮಿ(72) ಎಂಬುವರು ಮೃತರು ಎಂದು ತಿಳಿದುಬಂದಿದೆ. ಅವಿವಾಹಿತರಾಗಿದ್ದ ರಂಗಸ್ವಾಮಿ, ಸೋಮವಾರ ಮುಂಜಾನೆ ಗಾಳಿ ಆಂಜನೇಯ ಸ್ವಾಮಿ ದೇವಾಲಯಕ್ಕೆ ಬಂದು ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಹರಿದು ಮೃತಪಟ್ಟಿದ್ದಾರೆ. ಈ ಎರಡೂ ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಇಲ್ಲಿನ ಬ್ಯಾಟರಾಯನಪುರ ಸಂಚಾರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News