ಡಿ.3ರಿಂದ ಮೈಸೂರ್ ಸಿಲ್ಕ್ ಸೀರೆಗಳ ಪ್ರದರ್ಶನ, ಮಾರಾಟ

Update: 2019-12-02 16:52 GMT

ಮಂಗಳೂರು, ಡಿ. 2: ಕೆಎಸ್‌ಐಸಿ (ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ) ಇದರ ಪಾರಂಪಾರಿಕ ಉತ್ಪನ್ನವಾದ ಮೈಸೂರ್ ಸಿಲ್ಕ್ ಸೀರೆಗಳ ಪ್ರದರ್ಶನ ಮತ್ತು ಮಾರಾಟವನ್ನು ಡಿ.3ರಿಂದ 8ರವರೆಗೆ ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ನಗರದ ಲಾಲ್‌ಭಾಗ್ ಸಮೀಪದ ನೆಹರೂ ಅವೆನ್ಯೂ ರಸ್ತೆಯ ಮಂಗಳೂರು ಪ್ರಾದೇಶಿಕ ಹಿಂದಿ ಪ್ರಚಾರ ಸಮಿತಿ (ರಿ)ಯ ಸಭಾಂಗಣದಲ್ಲಿ ನಡೆಯಲಿದೆ. ದ.ಕ ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಡಿ.3ರಂದು ಬೆಳಗ್ಗೆ 9:30 ಗಂಟೆಗೆ ಸಿಲ್ಕ್ ಸೀರೆಗಳ ಪ್ರದರ್ಶನ ಮತ್ತು ಮಾರಾಟದ ಉದ್ಘಾಟನೆ ನೆರವೇರಿಸಲಿದ್ದಾರೆ.

ಸಾಂಪ್ರದಾಯಿಕ ಮೈಸೂರು ಸಿಲ್ಕ್ ಸೀರೆಗಳಲ್ಲದೆ ಕೆಎಸ್‌ಐಸಿಯು ನಾಜೂಕಾದ ವಿನ್ಯಾಸದ ಸಂಗ್ರಹಿತ ಕ್ರೇಪ್ ಡಿ ಚೈನ್ ಸೀರೆಗಳನ್ನು ಹಾಗೂ ಜಾರ್ಜೆಟ್ ಮತ್ತು ಸಾದಾ ಮುದ್ರಿತ ಸೀರೆಗಳನ್ನು,ಟೈ, ಸ್ಕಾರ್ಫ್ ಇತ್ಯಾದಿ ಉತ್ಪನ್ನಗಳನ್ನು ಪ್ರದರ್ಶಿಸಲಾಗುತ್ತದೆ. ಈ ಉತ್ಪನ್ನಗಳ ಮೇಲೆ ಶೇ.25ರವರೆಗೆ ವಿಶೇಷ ರಿಯಾಯಿತಿಯನ್ನು ನೀಡುತ್ತದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News