ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಸಿಐಡಿ ತನಿಖೆಗೆ ವಹಿಸಿಲು ಸರಕಾರಕ್ಕೆ ಹೈಕೋರ್ಟ್ ಆದೇಶ

Update: 2019-12-02 16:56 GMT

ಬೆಂಗಳೂರು, ಡಿ.2: ಕೆಂಗೇರಿ ಉಪನಗರದ ಸಂರಕ್ಷಣಾ ಅನಾಥಾಶ್ರಮದಲ್ಲಿ ಬಾಲಕಿಯರ ಮೇಲೆ ನಡೆದ ಲೈಂಗಿಕ ಕಿರುಕುಳ ಹಾಗೂ ದೈಹಿಕ ದೌರ್ಜನ್ಯದ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಆದೇಶಿಸಿದೆ. 

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ(ಕೆಎಸ್‌ಎಲ್‌ಎಸ್‌ಎ) ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಪೂರ್ಣಗೊಂಡು ಆದೇಶ ಕಾಯ್ದಿರಿಸಿದ್ದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಮುಹಮ್ಮದ್ ನವಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠವು ತೀರ್ಪುನ್ನು ಪ್ರಕಟಿಸಿದೆ.

ಕೆಂಗೇರಿಯ ಸ್ಯಾಟ್‌ಲೈಟ್ ಟೌನ್‌ನಲ್ಲಿ ರಕ್ಷಿಸಿದ ಬಾಲಕಿಯರ ಮಾನಸಿಕ ಆರೋಗ್ಯ ಸ್ಥಿತಿಯನ್ನು ತಪಾಸಣೆ ನಡೆಸಬೇಕು. ಮಕ್ಕಳ ಕಲ್ಯಾಣ ಸಮಿತಿಯಲ್ಲಿ ಇವರನ್ನು ಸೇರಿಸಿ ರಕ್ಷಣೆ, ಚಿಕಿತ್ಸೆ ನೀಡುವ ಕೆಲಸ ಮಾಡಬೇಕೆಂದು ನ್ಯಾಯಪೀಠವು ತನ್ನ ಆದೇಶದಲ್ಲಿ ತಿಳಿಸಿದೆ. ಪ್ರಕರಣದಲ್ಲಿ ಪೊಲೀಸರ ವೈಫಲ್ಯ, ನಿಷ್ಕ್ರಿಯತೆ ಎದ್ದು ಕಾಣುತ್ತಿದೆ. ಪ್ರಕರಣದಲ್ಲಿ ಸೂಕ್ಷ್ಮತೆ ಬಗ್ಗೆ ಪೊಲೀಸರಿಗೆ ಅರಿವು ಇದ್ದಂತಿಲ್ಲ. ಯಾವ ಪ್ರಕರಣದಲ್ಲಿ ಯಾವ ಕಾಯ್ದೆ, ನಿಯಮಗಳು ಅನ್ವಯಿಸುತ್ತವೆ ಎಂಬ ಕನಿಷ್ಠ ಜ್ಞಾನವೂ ಇಲ್ಲ ಎಂದು ನ್ಯಾಯಪೀಠವು ಈ ಮೊದಲು ಅಸಮಾಧಾನ ವ್ಯಕ್ತಪಡಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News