×
Ad

ಡಿ.6ರಂದು ಸಂವಿಧಾನ ಸಂರಕ್ಷಣಾ ದಿನಾಚರಣೆ

Update: 2019-12-03 19:50 IST

ಉಡುಪಿ, ಡಿ.3: ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಉಡುಪಿ ಜಿಲ್ಲಾ ಸಮಿತಿ ಹಾಗೂ ಕರ್ನಾಟಕ ಬೌದ್ಧ ಮಹಾಸಭಾ ಉಡುಪಿ ಜಿಲ್ಲಾ ಘಟಕವು ಡಿ.6ರಂದು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನವನ್ನು ಸಂವಿಧಾನ ಸಂರಕ್ಷಣಾ ದಿನವನ್ನಾಗಿ ಆಚರಣೆ ಮಾಡಲಿದೆ.

ಈ ಪ್ರಯುಕ್ತ ಸಂಜೆ 5:30ಕ್ಕೆ ನಗರದ ಜೋಡುರಸ್ತೆಯಿಂದ ಮೊಂಬತ್ತಿ ಜಾಥಾ ಹೊರಟು ಬೋರ್ಡ್ ಹೈಸ್ಕೂಲ್ ಆವರಣದಲ್ಲಿ ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಸಮಾಪನಗೊಳ್ಳಲಿದೆ ಎಂದು ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಸುಂದರ್ ಮಾಸ್ತರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News