50 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ

Update: 2019-12-03 15:49 GMT

 ಅಮರಾವತಿ, ಡಿ.3: ಹೈದರಾಬಾದ್‌ನಲ್ಲಿ ಪಶುವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದಿರುವ ಅಮಾನುಷ ಘಟನೆಯ ಬೆನ್ನಲ್ಲೇ ಆಂಧ್ರಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಘಟನೆ ವರದಿಯಾಗಿದೆ. ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ 50 ವರ್ಷದ ವಿಧವೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಪೂರ್ವ ಗೋದಾವರಿ ಜಿಲ್ಲೆಯ ಜಿ ವೇಮಾವರಮ್ ಜಿಲ್ಲೆಯಲ್ಲಿ ಮೂವರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಮಹಿಳೆಯ ಪತಿ ಹಾಗೂ ಪುತ್ರ ಮೃತಪಟ್ಟಿದ್ದು ಪುತ್ರಿ ಹೈದರಾಬಾದ್‌ನಲ್ಲಿದ್ದಾರೆ. ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿದ್ದ ಸಂದರ್ಭ ಮನೆಗೆ ನುಗ್ಗಿದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು ಇನ್ನಿಬ್ಬರನ್ನು ಶೀಘ್ರ ಬಂಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ಹೇಳಿದ್ದಾರೆ.

      ಈ ಮಧ್ಯೆ, ಆಂಧ್ರಪ್ರದೇಶದ ಗೃಹ ಸಚಿವೆ ಎಂ ಸುಚರಿತ ಗುಂಟೂರು ಜಿಲ್ಲೆಯಲ್ಲಿರುವ ಮಹಿಳಾ ಪೊಲೀಸ್ ಠಾಣೆಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೂರು ನೀಡಿದರೂ ಪೊಲೀಸರು ಸಮರ್ಪಕವಾಗಿ ಪ್ರತಿಕ್ರಿಯಿಸುತ್ತಿಲ್ಲ ಎಂದು ಈ ಸಂದರ್ಭ ಕೆಲವು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು . ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣ ಹೆಚ್ಚುತ್ತಿದ್ದು ಪೊಲೀಸರು ಜಾಗೃತರಾಗಿರಬೇಕು ಮತ್ತು ಅಪರಾಧಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ಸಚಿವೆ ಸೂಚನೆ ನೀಡಿದರು ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News