×
Ad

ಮಂಗಳೂರು: ವಿಶ್ವ ವಿಶೇಷ ಚೇತನರ ದಿನಾಚರಣೆ

Update: 2019-12-03 21:48 IST

ಮಂಗಳೂರು, ಡಿ.3: ದ.ಕ. ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಶೇಷ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಲಯನ್ಸ್ ಕ್ಲಬ್ ಗಾಂದಿನಗರ ಹಾಗೂ ಇತರ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಮಂಗಳವಾರ ನಗರದ ಪುರಭವನದಲ್ಲಿ ವಿಶ್ವ ವಿಶೇಷ ಚೇತನರ ದಿನಾಚರಣೆ ಜರುಗಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ವಿಶೇಷ ಚೇತನರ ಮನಸ್ಥಿತಿಯನ್ನು ಅರ್ಥ ಮಾಡಿಕೊಂಡು ಅವರ ಬೆಳವಣಿಗೆಗಾಗಿ ಇನ್ನಷ್ಟು ಕಾರ್ಯಕ್ರಮಗಳನ್ನು ಆಯೋಜಿಸಬೇಕಿದೆ. ಅದಕ್ಕೂ ಮುನ್ನ ಸಮಾಜದಲ್ಲಿ ಆ ಬಗ್ಗೆ ಜಾಗೃತಿ ಮೂಡಿಸಬೇಕಿದೆ. ಎಂದು ಹೇಳಿದರು.

ಶಾಸಕ ಡಿ.ವೇದವ್ಯಾಸ ಕಾಮತ್, ದ.ಕ.ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿಪಂ ಸದಸ್ಯೆ ಮಮತಾ ಗಟ್ಟಿ, ವಿಶೇಷ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ನಿರಂಜನ್ ಭಟ್, ತುಳು ಅಕಾಡಮಿ ಅಧ್ಯಕ್ಷ ದಯಾನಂದ್ ಕತ್ತಲ್‌ಸಾರ್, ಲಯನ್ಸ್ ಗವರ್ನರ್ ರುಡಾಲ್ಫ್ ಗೋಮ್ಸ್, ಲಯನ್ಸ್ ಗಾಂಧಿನ ಗರದ ಅಧ್ಯಕ್ಷ ಸುಧಾಕರ ಶೆಟ್ಟಿ, ಕಾರ್ಪೊರೇಟರ್ ಜಗದೀಶ್ ಶೆಟ್ಟಿ, ದಿನೇಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಈ ಸಂದರ್ಭ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ವಿಶೇಷ ಚೇತನರನ್ನು ಹಾಗೂ ಅವರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಂಸ್ಥೆಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಉಸ್ಮಾನ್ ಸ್ವಾಗತಿಸಿದರು. ಡಾ.ವಸಂತ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ವಿಶೇಷ ಚೇತನರ ಸಬಲೀಕರಣ ಅಧಿಕಾರಿ ಯಮುನಾ ಡಿ. ಪ್ರಶಸ್ತಿ ವಿತರಣಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News