ಉಪ ಲೋಕಾಯುಕ್ತರ ನೇಮಕ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆ

Update: 2019-12-03 16:33 GMT

ಬೆಂಗಳೂರು, ಡಿ.3: ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರನ್ನು ಉಪ ಲೋಕಾಯುಕ್ತರನ್ನಾಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಮಾಜ ಪರಿವರ್ತನಾ ಸಮುದಾಯದ ಮುಖಂಡ ಎಸ್.ಆರ್.ಹಿರೇಮಠ್ ಅವರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸುವಂತೆ ಕೋರಿ ಅರ್ಜಿದಾರರ ಪರ ವಕೀಲರು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಮೆಮೊ ಸಲ್ಲಿಸಿದರು. ಇದನ್ನು ಪರಿಗಣಿಸಿದ ನ್ಯಾಯಪೀಠವು ಡಿ.4ರಂದು ಬೇರೊಂದು ಪೀಠದ ಮುಂದೆ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸುವಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್‌ಗೆ ತಿಳಿಸಿದರು.

ಬಿ.ಎಸ್.ಪಾಟೀಲ ಅವರನ್ನು ಉಪ ಲೋಕಾಯುಕ್ತರನ್ನಾಗಿ ನೇಮಕ ಮಾಡುವ ಮುನ್ನ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಅನುಮತಿ ನೀಡಿಲ್ಲ ಎಂಬ ಅಂಶ ಬೆಳಕಿಗೆ ಬಂದಿತ್ತು. 14 ವರ್ಷಗಳ ಕಾಲ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದ ಪಾಟೀಲ ಅವರು 2019ರ ನ.21ರಂದು ಉಪಲೋಕಾಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News